ಉನ್ನತ ಶಿಕ್ಷಣದಲ್ಲಿ ಬೆಳವಣಿಗೆಗಳು : ಅ.28ರಂದು ವಿಶೇಷ ಉಪನ್ಯಾಸ
ಚಿತ್ರದುರ್ಗ, 26 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಸಹಯೋಗದಲ್ಲಿ ಇದೇ ಅಕ್ಟೋಬರ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ “ಉನ್ನತ ಶಿಕ್ಷಣದಲ್
ಉನ್ನತ ಶಿಕ್ಷಣದಲ್ಲಿ ಬೆಳವಣಿಗೆಗಳು : ಅ.28ರಂದು ವಿಶೇಷ ಉಪನ್ಯಾಸ


ಚಿತ್ರದುರ್ಗ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಸಹಯೋಗದಲ್ಲಿ ಇದೇ ಅಕ್ಟೋಬರ್ 28ರಂದು ಬೆಳಿಗ್ಗೆ 11ಕ್ಕೆ ನಗರದ ಸರ್ಕಾರಿ ಕಲಾ ಕಾಲೇಜಿನ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ “ಉನ್ನತ ಶಿಕ್ಷಣದಲ್ಲಿ ಇತ್ತೀಚಿನ ಬೆಳವಣಿಗೆಗಳು” ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷರು, ಗುಲ್ಬರ್ಗಾ ವಿಶ್ವವಿದ್ಯಾಲಯ ಮಾಜಿ ಉಪಕುಲಪತಿಗಳು, ಮೈಸೂರು ವಿಶ್ವವಿದ್ಯಾಲಯ ಗೌರವಾನ್ವಿತ ಗಣ್ಯ ಪ್ರಾಧ್ಯಾಪಕ ಪ್ರೊ.ಎಸ್.ಆರ್.ನಿರಂಜನ ವಿಶೇಷ ಉಪನ್ಯಾಸ ನೀಡುವರು. ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲ ಪ್ರೊ.ಜೆ.ಕರಿಯಪ್ಪ ಮಾಳಿಗೆ ಅಧ್ಯಕ್ಷತೆ ವಹಿಸುವರು.

ಸರ್ಕಾರಿ ಕಲಾ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ಐಕ್ಯೂಎಸಿ ಸಂಚಾಲಕಿ ಪ್ರೊ.ಆರ್.ತಾರಿಣಿ ಶುಭದಾಯಿನಿ, ಪ್ರಾಧ್ಯಾಪಕ ಹಾಗೂ ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ.ಬಿ.ಸುರೇಶ, ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ಕಾಲೇಜು ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ.ಹನುಮಂತಪ್ಪ, ಪತ್ರಾಂಕಿತ ವ್ಯವಸ್ಥಾಪಕ ಮಾರ್ಟಿನ್ ಸ್ಯಾಮುಯಲ್ ಡಬ್ಲ್ಯೂ ಉಪಸ್ಥಿತಿವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande