ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಸಚಿವ ಗುಂಡೂರಾವ್ ಚಾಲನೆ
ಬೆಂಗಳೂರು, 26 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಗಾಂಧಿನಗರ ಕ್ಷೇತ್ರದ ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ ವಿರುದ್ಧ ನಡೆದ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರ
Gundu rao


ಬೆಂಗಳೂರು, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಗಾಂಧಿನಗರ ಕ್ಷೇತ್ರದ ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ ವಿರುದ್ಧ ನಡೆದ ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಈಗಾಗಲೇ ಮತಗಳ್ಳತನ ವಿರುದ್ಧ ರಾಹುಲ್ ಗಾಂಧಿ ಸವಿಸ್ತಾರವಾಗಿ ದೇಶದ ಜನತೆಗೆ ದಾಖಲೆಯ ಸಮೇತವಾಗಿ ನಿರೂಪಿಸಿದ್ದಾರೆ. ಇದು ಇಡೀ ದೇಶವೇ ಆಂತಕಪಡುವ ಸ್ಥಿತಿಯಲ್ಲಿದೆ. ಸಂವಿಧಾನಿಕ ಪೀಠಗಳನ್ನು ಬಿಜೆಪಿ ತಮ್ಮ ವೋಟ್ ಬ್ಯಾಂಕ್ ಮಾಡಿಕೊಂಡಿರುವುದು ಅತ್ಯಂತ ಖಂಡನೀಯ ಎಂದರು.

ರಾಜ್ಯದ ಮಹದೇವಪುರ ಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಸೃಷ್ಟಿಸಿ, ಅವರಿಂದ ಮತದಾನ ಪಡೆದುಕೊಂಡು ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರಕ್ಕೆ ಜನರು ಪ್ರಶ್ನೆ ಮಾಡಬೇಕಾಗಿದೆ. ಇದು ಸಂಪೂರ್ಣ ಪ್ರಜಾಪ್ರಭುತ್ವದ ಕಗ್ಗೊಲೆ. ಚುನಾವಣಾ ಆಯೋಗವನ್ನು ತಮ್ಮ ಕೈಗೊಂಬೆಯಾಗಿಸಿಕೊಂಡು ಇಲ್ಲದೆ ಇರುವ ಮತದಾರರನ್ನು ಸೃಷ್ಟಿಸಿ, ಸಂವಿಧಾನಿಕ ಮೌಲ್ಯಗಳನ್ನು ಮೂಲೆಗುಂಪು ಮಾಡಿ ವೋಟ್ ಚೋರಿ ನಡೆಸಿ ಅಧಿಕಾರಕ್ಕೆ ಬಂದಿರುವುದು ಶೋಚನೀಯ. ನಮ್ಮ ಚಿಕ್ಕಪೇಟೆಯ ವಾರ್ಡ್ ನಲ್ಲಿಯೇ ಸಾವಿರಾರು ನಕಲಿ ಮತದಾರರನ್ನು ನಮ್ಮ ಕಾರ್ಯಕರ್ತರು ಗುರುತಿಸಿದ್ದಾರೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande