
ಬೆಂಗಳೂರು, 26 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಬಳಿ ಬೆಣ್ಣೆಗೆರೆ ಗ್ರಾಮದ ಅರಣ್ಯದ ಅಂಚಿನಲ್ಲಿ ಹುಲಿ ದಾಳಿಯಿಂದ ರಾಜಶೇಖರ ಎಂಬುವವರು ಮೃತಪಟ್ಟಿರುವ ಸುದ್ದಿ ಅತೀವ ದುಃಖಕರವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಕಾಡಿನ ಅಂಚಿನ ಗ್ರಾಮಗಳ ನಿವಾಸಿಗಳು, ದನ ಮೇಯಿಸಲು ಅಥವಾ ತೋಟದ ಕೆಲಸಕ್ಕಾಗಿ ಕಾಡಿನ ಸುತ್ತಮುತ್ತ ತೆರಳುವವರು ಹೆಚ್ಚು ಎಚ್ಚರಿಕೆಯಿಂದ ಇರಬೇಕೆಂದು ವಿನಂತಿಸಿದ್ದಾರೆ.
ಈ ದುರ್ಘಟನೆಯಿಂದ ಮೃತಪಟ್ಟ ರಾಜಶೇಖರ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರು ಈ ದುಃಖವನ್ನು ಸಹಿಸುವ ಶಕ್ತಿ ಪಡೆಯಲಿ ಎಂದು ಪ್ರಾರ್ಥಿಸುತ್ತೇನೆ.
ಘಟನೆಯ ಸ್ಥಳಕ್ಕೆ ತಕ್ಷಣವೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಭೇಟಿ ನೀಡಿ, ಮಾನವನ ರಕ್ತದ ರುಚಿ ಕಂಡಿರುವ ಹುಲಿಯನ್ನು ಸೆರೆಹಿಡಿಯಲು ತುರ್ತು ಕ್ರಮ ಕೈಗೊಳ್ಳುವಂತೆ ಹಾಗೂ ಮೃತರ ಕುಟುಂಬಕ್ಕೆ ಅಗತ್ಯ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa