



ರಾಯಚೂರು, 26 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಶ್ರೀ ಚಂದ್ರ ಮೌಳೇಶ್ವರ ದೇವಸ್ಥಾನದಲ್ಲಿ ಆಯೋಜಿಸುವ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹಾಗೂ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಅನುಕೂಲವಾಗಲಿ ಎಂದು ಪ್ರಾಂಗಣ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ತಿಳಿಸಿದರು.
ರಾಯಚೂರು ನಗರದ ಐತಿಹಾಸಿಕ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ನಾಡಿನ ಒಳಿತಿಗಾಗಿ ವಿಷೇಶ ಪೂಜೆ ಸಲ್ಲಿಸಿ 2024-25 ನೇ ಸಾಲಿನ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ ಪ್ರಾಂಗಣ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದರು.
ಶ್ರೀ ಚಂದ್ರಮೌಳೇಶ್ವದ ದೇವಸ್ಥಾನ ಐತಿಹಾಸಿಕ ದೇವಸ್ಥಾನವಾಗಿದೆ. ನಗರದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ವಿವಿಧ ಧಾರ್ಮಿಕ ದೈವೀ ಕಾರ್ಯಕ್ರಮಗಳನ್ನು ಮಾಡುತ್ತಾರೆ. ಸದರಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲವಾಗಲೆಂದು ಪ್ರಾಂಗಣ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮಠ- ಮಾನ್ಯಗಳು ಸಮಾಜದಲ್ಲಿ ಶಾಂತಿ ಸೌಹಾರ್ಧತೆಯ ಸಂಕೇತವಾಗಿವೆ. ಎಲ್ಲಾ ರೀತಿಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಮಠ ಮಾನ್ಯಗಳು ಸಹಕಾರಿಯಾಗಿವೆ ಅಂತಹ ದೇವಸ್ಥಾನಗಳ ಅಭಿವೃದ್ಧಿಗಾಗಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಪಾರಸಮಾಲ್ ಸುಖಾಣಿ, ಮಹಾನಗರ ಪಾಲಿಕೆ ಮಹಾ ಪೌರರಾದ ನರಸಮ್ಮ ನರಸಿಂಹಲು ಮಾಡಗಿರಿ, ವಿರೂಪಾಕ್ಷಪ್ಪ ಕ್ಯಾದಿಗೇರಿ ಶಿವಶಂಕರ್ ಬಾಳೆ, ರುದ್ರಪ್ಪ ಅಂಗಡಿ, ಜಿ ಶಿವಮೂರ್ತಿ, ನರೇಶ್ ಬೆಲ್ಲಂ, ಡಾ ನಾಗರಾಜ ಬಾಲ್ಕಿ, ಹರಿ ಬಾಬು, ಕಾಂಗ್ರೆಸ್ ಯುವ ಮುಖಂಡರಾದ ಅರುಣದೋತರ ಬಂಡಿ, ಪ್ರಶಾಂತ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್