ಟಿಎಪಿಸಿಎಂಎಸ್ ನೂತನ ನಿರ್ದೇಶಕರಿಂದ ಸಚಿವ ಶಿವಾನಂದ ಪಾಟೀಲರಿಗೆ ಸನ್ಮಾನ
ವಿಜಯಪುರ, 26 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ತಾಲೂಕ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿ.ಎ.ಪಿ.ಸಿ.ಎಂ.ಎಸ್) ಗೆ ಅವಿರೋಧ ಆಯ್ಕೆಯಾದ ನೂತನ ನಿರ್ದೇಶಕರು ವಿಜಯಪುರ ಜಿಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿ
ಪಾಟೀಲ


ವಿಜಯಪುರ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ತಾಲೂಕ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ (ಟಿ.ಎ.ಪಿ.ಸಿ.ಎಂ.ಎಸ್) ಗೆ ಅವಿರೋಧ ಆಯ್ಕೆಯಾದ ನೂತನ ನಿರ್ದೇಶಕರು ವಿಜಯಪುರ ಜಿಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿದರು.

ಉತ್ನಾಳದ ಬಸವರಾಜ ಕಳಸಗೊಂಡ, ಹಿಟ್ನಳ್ಳಿಯ ಮುರಳಿದರ ಭಾವಿಕಟ್ಟಿ ಹಾಗೂ ಉತ್ನಾಳದ ಜ್ಯೋತಿಲಕ್ಷ್ಮಿ ಹರಿಜನ ಇವರು ವಿಜಯಪುರ ಟಿ.ಎ.ಪಿ.ಸಿ.ಎಂ.ಎಸ್ ಗೆ ಅವಿರೋಧ ಆಯ್ಕೆಯಾಗಿದ್ದಾರೆ.

ಈ ಹಿನ್ನಲೆಯಲ್ಲಿ ಹಿಟ್ನಳ್ಳಿ, ಉತ್ನಾಳ ಗ್ರಾಮಸ್ಥರೊಂದಿಗೆ ವಿಜಯಪುರ ನಗರದಲ್ಲಿರುವ ಸಚಿವರ ಗೃಹ ಕಛೇರಿಗೆ ಆಗಮಿಸಿದ ಅವಿರೋಧ ಆಯ್ಕೆಯಾಗಿರುವ ನಿರ್ದೇಶಕರು, ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ರೈತರ ಹಿತ ರಕ್ಷಣೆಗೆ ಆದ್ಯತೆ ನೀಡುವ ಜೊತೆಗೆ ಪಾರದರ್ಶಕತೆ, ಪ್ರಾಮಾಣಿಕತೆ ಹಾಗೂ ಸೇವಾ ಬದ್ಧತೆಯೊಂದಿಗೆ ರೈತರ ಸೇವೆ ಮಾಡುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷರಾದ ಸಾಹೇಬಗೌಡ ಬಿರಾದಾರ, ಹಿಟ್ನಳ್ಳಿ ಪಿಕೆಪಿಎಸ್ ಅಧ್ಯಕ್ಷರಾದ ಜಗನ್ನಾಥ ಚೌಧರಿ, ನಾನಾಗೌಡ ಕಳಸಗೊಂಡ, ಸಾಹೇಬಗೌಡ ಬಗಲಿ, ಸುಭಶ ಯಂಬತ್ನಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande