ಈಶಾನ್ಯ ಶಿಕ್ಷಕರ ಕ್ಷೇತ್ರ : ನಾಳೆ ವಿಶೇಷ ಮಿಂಚಿನ ನೋಂದಣಿ
ರಾಯಚೂರು, 26 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಕುರಿತ ವಿಶೇಷ ಮಿಂಚಿನ ನೋಂದಣಿ ಅಭಿಯಾನವು ನಾಳೆ ರಾಯಚೂರು ಜಿಲ್ಲೆಯಲ್ಲಿ ನಡೆಯಲಿದೆ. ರಾಯಚೂರಿನ ಕೃಷಿ ವಿಶ್ವವಿದ್ಯಾಲಯ, ಆದಿಕವಿ ಮಹರ್ಷಿ ವಾಲ
ಈಶಾನ್ಯ ಶಿಕ್ಷಕರ ಕ್ಷೇತ್ರ : ನಾಳೆ ವಿಶೇಷ ಮಿಂಚಿನ ನೋಂದಣಿ


ರಾಯಚೂರು, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಕುರಿತ ವಿಶೇಷ ಮಿಂಚಿನ ನೋಂದಣಿ ಅಭಿಯಾನವು ನಾಳೆ ರಾಯಚೂರು ಜಿಲ್ಲೆಯಲ್ಲಿ ನಡೆಯಲಿದೆ.

ರಾಯಚೂರಿನ ಕೃಷಿ ವಿಶ್ವವಿದ್ಯಾಲಯ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ, ರಿಮ್ಸ್, ಡೆಂಟಲ್ ಕಾಲೇಜು, ಪ್ಯಾರಾ ಮೆಡಿಕಲ್ ಕಾಲೇಜು, ಪಾಲಿಟೆಕ್ನಿಕ್, ನವೋದಯ ಎಂಜಿನಿಯರಿ0ಗ್ ಕಾಲೇಜು, ನವೋದಯ ವೈದ್ಯಕೀಯ ಕಾಲೇಜು, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜಿಲ್ಲೆ ಎಲ್ಲ ತಹಸೀಲ್ದಾರ ಕಚೇರಿಗಳಲ್ಲಿ, ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಹಾಗೂ ಕಚೇರಿಗಳಲ್ಲಿ ಅಕ್ಟೋಬರ್ 27ರಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಣಿಗಾಗಿ ವಿಶೇಷ ಮಿಂಚಿನ ನೋಂದಣಿ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಈಶ್ವರ್ ಕಾಂದೂ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande