
ಮಂಡ್ಯ, 26 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಕೆ ಆರ್ ಎಸ್ ಜಲಾಶಯಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಸರ್ಕಾರ ವರುಣನ ಕೃಪೆಗೆ ಪಾತ್ರವಾಗಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa