
ಚಿತ್ರದುರ್ಗ, 26 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಪಿ.ರಘು ಅಕ್ಟೋಬರ್ 30 ರಿಂದ ನವೆಂಬರ್ 01 ರವರೆಗೆ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅ.30ರಂದು ಮಧ್ಯಾಹ್ನ 3ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 6ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಅ.31ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಜಿಲ್ಲೆಯ ನಗರಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರು ಮತ್ತು ಇತರೆ ಸಂಸ್ಥೆಗಳ ಸ್ವಚ್ಛತಾ ಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ನಡೆಸುವರು.
ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯಿತಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು, ಪೌರ ಕಾರ್ಮಿಕರಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನವೆಂಬರ್ 01ರಂದು ಬೆಳಿಗ್ಗೆ 8.30ಕ್ಕೆ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸಂಶೋಧನಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa