
ಧಾರವಾಡ, 26 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬಣ್ಣದ ಹಬ್ಬ - ರಾಜ್ಯ ಮಟ್ಟದ ಯುವ ಕಲಾವಿದರ ಚಿತ್ರಕಲಾ ಶಿಬಿರವನ್ನು ಅಕ್ಟೋಬರ್ 29, 2025 ರಿಂದ ಅಕ್ಟೋಬರ್ 31, 2025 ರವರೆಗೆ ಧಾರವಾಡದ ಸರ್ಕಾರಿ ಆರ್ಟ ಗ್ಯಾಲರಿಯಲ್ಲಿ ಚಿತ್ರಕಲಾ ಶಿಬಿರವನ್ನು ಏರ್ಪಡಿಸಲಾಗಿದೆ.
ಅಕ್ಟೋಬರ್ 29, 2025 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಆರ್ಟ ಗ್ಯಾಲರಿಯಲ್ಲಿ ಉದ್ಘಾಟನಾ ಸಮಾರಂಭ ನೆರವೆರುವುದು. ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಉದ್ಘಾಟಿಸುವರು.
ರಾಜ್ಯ ಮಟ್ಟದ ಚಿತ್ರಕಲಾವಿದರ ಶಿಬಿರದಲ್ಲಿ ವಿವಿಧ ಜಿಲ್ಲೆಗಳಿಂದ ಯುವ ಚಿತ್ರಕಲಾವಿದರು ಭಾಗವಹಿಸುವರು. ಕಲಾವಿದರು ರಚಿಸಿರುವ ಕಲಾಕೃತಿಗಳ ಪ್ರದರ್ಶನ ಹಾಗೂ ಟ್ರಸ್ಟಿನ ಕಲಾಕೃತಿಗಳ ಪ್ರದರ್ಶನವನ್ನು ನವೆಂಬರ 01, 2025 ರಿಂದ ನವೆಂಬರ 10, 2025 ರವರೆಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಚಿತ್ರಕಲಾ ಪ್ರದರ್ಶನ ಭವನದಲ್ಲಿ ಏರ್ಪಡಿಸಲಾಗಿದೆ.
ಚಿತ್ರಕಲಾವಿದರು, ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಕಲಾಸಕ್ತರು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa