
ಮುಂಬಯಿ, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮುಂಬೈ ಚರ್ಚ್ ಗೇಟ್ ಬಳಿಯ ವಾಸನಿ ಚೇಂಬರ್ಸ್‌ನಲ್ಲಿ ಮಹಾರಾಷ್ಟ್ರ ಬಿಜೆಪಿ ನೂತನ ಕಚೇರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಮಧ್ಯಾಹ್ನ 1:15ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಘೋಷಣೆಯಂತೆ, ದೇಶಾದ್ಯಂತ 768 ಬಿಜೆಪಿ ಕಚೇರಿಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಈಗಾಗಲೇ 563 ಕಚೇರಿಗಳ ನಿರ್ಮಾಣ ಪೂರ್ಣಗೊಂಡಿದ್ದು, 96 ಕಚೇರಿಗಳು ನಿರ್ಮಾಣ ಹಂತದಲ್ಲಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa