ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಪ್ರಕರಣ : ಮುಖ್ಯಮಂತ್ರಿ
ಮಂಗಳೂರು, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮ
Cm


ಮಂಗಳೂರು, 27 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಪ್ರಕರಣ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande