
ಕಾರಟಗಿ, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಭಾರತೀಯ ಹತ್ತಿ ನಿಗಮ (ಸಿಸಿಐ)ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಯೋಜನೆಯಡಿಯಲ್ಲಿ ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಮೂಲಕ ಹತ್ತಿ ಖರೀದಿ ಕೈಗೊಳ್ಳಲಿದ್ದು, ಕೊಪ್ಪಳ ಜಿಲ್ಲೆಯಲ್ಲಿ 2025-26ನೇ ಸಾಲಿನ ಬೆಳೆ ವರ್ಷಕ್ಕೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಹತ್ತಿ ಮಾರಾಟ ಮಾಡಲು ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ನಲ್ಲಿ ಸ್ವಯಂ ನೋಂದಣಿಗೆ ಅವಕಾಶ ನೀಡಲಾಗಿದೆ.
ರೈತರು ಅಕ್ಟೋಬರ್ 31 ರೊಳಗಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದು. ಕಾರಟಗಿಯಲ್ಲಿ ಹತ್ತಿ ಖರೀದಿ ಕೇಂದ್ರವಿದ್ದು, ಅ.21 ರಿಂದ ಹತ್ತಿ ಖರೀದಿ ಪ್ರಾಂರಭಿಸಲಾಗಿದೆ. ಅಪ್ಲಿಕೇಶನ್ ನಲ್ಲಿ ಸ್ವಯಂ ನೋಂದಣಿ ಮಾಡಿದವರಿಗೆ ಮಾತ್ರ ಹತ್ತಿ ಮಾರಾಟಕ್ಕೆ ಅವಕಾಶ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಚಾಮಲಾಪುರ ಜಿನ್ನಿಂಗ್ & ಪ್ರೆಸ್ಸಿಂಗ್ ಕಾಟನ್ ಫ್ಯಾಕ್ಟರಿ, ಮೈಲಾಪೂರ ಕಾಲುವೆ, ನವಲಿ ರಸ್ತೆ, ಕಾರಟಗಿ, ಮೊ.ನಂ: 9448466466 ಇಲ್ಲಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್