ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಗದಗ, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ನಾಳೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು ವಿವರ ಇಂತಿದೆ. ನಾಳೆ ಬೆಳ
ಪೋಟೋ


ಗದಗ, 27 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ನಾಳೆ ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು ವಿವರ ಇಂತಿದೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಗದಗದ ವಾರ್ಡ ನಂ. 35 , ನೀಲಮ್ಮ ತಾಯಿ ಮಠದ ಹತ್ತಿರ ಕಾಂಕ್ರೀಟ್ ರಸ್ತೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 10.30 ಗಂಟೆಗೆ ನಗರದ ಜುಮ್ಮಾ ಮಸೀದಿ ಹತ್ತಿರ ವಿವಿಧ ಭಾಗಗಳಲ್ಲಿ ಹೈಮಾಸ್ಕ್ ಅಳವಡಿಸುವ ಕಾಮಗಾರಿಯ ಭೂಮಿ ಪೂಜೆ ನೆರವೇರಿಸುವರು. ಬೆಳಿಗ್ಗೆ 10.45 ಗಂಟೆಗೆ ನಗರದ ಬಸವೇಶ್ವರ ನಗರ ವಾರ್ಡ ನಂ. 15 ರಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ನೆರವೇರಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಮಹಾತ್ಮಾ ಗಾಂಧಿ ಹಾಗೂ ಟಿಪ್ಪು ಸುಲ್ತಾನ ವರ್ತುಲ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ನೆರವೇರಿಸುವರು.

ಬೆಳಿಗ್ಗೆ 11.15 ಗಂಟೆಗೆ ಕಾಶಿವಿಶ್ವನಾಥ ನಗರದ ವಾರ್ಡ ನಂ. 27 ರಲ್ಲಿ ಉದ್ಯಾನವನ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 11.30 ಗಂಟೆಗೆ ವಾರ್ಡ ನಂ. 34 ನಂದೀಶ್ವರ ನಗರದಲ್ಲಿ ಹೊಸದಾಗಿ ನಿರ್ಮಾಣ ಮಾಡಲಾದ ಅಂಗನವಾಡಿ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ವಾರ್ಡ ನಂ. 34 ವಾಂಬೆ ಬಡಾವಣೆಯಲ್ಲಿ ಚರಂಡಿ ಮತ್ತು ರಾಜಕಾಲುವೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.. ಮಧ್ಯಾಹ್ನ 12.30 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ವಿಡಿಯೋ ಕಾನ್ಫರನ್ಸ್ ಹಾಲ್ ದಲ್ಲಿ ಗದಗ ತಾಲೂಕು ಮಟ್ಟದ ತ್ರೈಮಾಸಿಕ ಗ್ಯಾರಂಟಿ ಸಮಿತಿ ಸಭೆಯಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande