
ಕೊಪ್ಪಳ, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : 2025ನೇ ಸಾಲಿನಲ್ಲಿ ಸರ್ಕಾರದಿಂದ ಶ್ರೇಷ್ಠ ಸಹಕಾರಿಗಳನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ನೀಡಲಾಗುತ್ತಿದ್ದು, ಅರ್ಹ ಸಹಕಾರಿಗಳಿಂದ ಪ್ರಸ್ತಾವನೆ ಆಹ್ವಾನಿಸಿದೆ.
ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರುವ, ಕೊಪ್ಪಳ ಜಿಲ್ಲೆಯ ನಿವಾಸಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಪೂರಕ ಮಾಹಿತಿಯ ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 31 ರೊಳಗೆ ಸಹಕಾರ ಸಂಘಗಳ ಉಪ ನಿಬಂಧಕರು, ಕೊಪ್ಪಳ ಇವರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್