ಈಶಾನ್ಯ ಶಿಕ್ಷಕರ ಕ್ಷೇತ್ರ : ರಾಯಚೂರಿನಲ್ಲಿ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ
ರಾಯಚೂರು, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಅವರು ಹೇಳಿದರು. ಅಕ್ಟೋಬರ್ 27ರಂದು
ಈಶಾನ್ಯ ಶಿಕ್ಷಕರ ಕ್ಷೇತ್ರ : ರಾಯಚೂರಿನಲ್ಲಿ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ


ಈಶಾನ್ಯ ಶಿಕ್ಷಕರ ಕ್ಷೇತ್ರ : ರಾಯಚೂರಿನಲ್ಲಿ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ


ಈಶಾನ್ಯ ಶಿಕ್ಷಕರ ಕ್ಷೇತ್ರ : ರಾಯಚೂರಿನಲ್ಲಿ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ


ಈಶಾನ್ಯ ಶಿಕ್ಷಕರ ಕ್ಷೇತ್ರ : ರಾಯಚೂರಿನಲ್ಲಿ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ


ರಾಯಚೂರು, 27 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅರ್ಹ ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಅವರು ಹೇಳಿದರು.

ಅಕ್ಟೋಬರ್ 27ರಂದು, ಸೋಮವಾರ ನಗರದ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸ್ವೀಪ್ ಸಮಿತಿ ಹಾಗೂ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ- 2026ರ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅರ್ಹ ಮತದಾರರು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನವೆಂಬರ್ 6 ಕೊನೆಯ ದಿನವಾಗಿದ್ದು, ಅಲ್ಲಿವರೆಗೆ ಕಾಯದೇ ಕೂಡಲೇ ಹೆಸರು ನೋಂದಾಯಿಸಿಕೊಳ್ಳಬೇಕು. ಈ ಹಿಂದಿನ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ಸಹ ನಮೂನೆ 19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಮತದಾರರ ಪರಿಷ್ಕರಣೆ ಭಾಗವಾಗಿ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25 ರಂದು ಪ್ರಕಟಿಸಿ ಡಿಸೆಂಬರ್ 10 ರೊಳಗೆ ಆಕ್ಷೇಪಣೆ ಸ್ವೀಕರಿಸಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು 2025ರ ಡಿಸೆಂಬರ್ 30 ರಂದು ಪ್ರಕಟಿಸಲಾಗುತ್ತದೆ ಎಂದರು.

ಜಿಲ್ಲೆಯ ಎಲ್ಲಾ ತಾಲೂಕಿನ ತಹಶೀಲ್ದಾರರು ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದು, ಈ ಕಚೇರಿಗಳಿಗೆ ಕಾಲಮಿತಿಯಲ್ಲಿ ಅರ್ಜಿ, ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದರು.

ಶೇ.100ರಷ್ಟು ನೋಂದಣಿ ಮಾಡಿ: ರಿಮ್ಸ್ ಸಂಸ್ಥೆಯ ಎಲ್ಲ ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಪ್ಪದೇ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಗೂ ಮತದಾನ ಮಾಡುವ ಹಕ್ಕನ್ನು ನೀಡಿದೆ. ಹೆಸರು ನೋಂದಣಿ ಮಾಡಿಸಿದ್ದಲ್ಲಿ ಮಾತ್ರ ಮತದಾನ ಮಾಡಲಿಕ್ಕೆ ಅವಕಾಶ ಸಿಗಲಿದೆ ಎಂದು ತಿಳಿಸಿದರು.

ಹೆಸರು ಸೇರಿಸಲು ಅರ್ಹತೆ: ಭಾರತದ ಪ್ರಜೆಯಾಗಿರುವ ಆಯಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಹಾಗೂ 1ನೇ ನವೆಂಬರ್ 2025ಕ್ಕೆ ಮೊದಲ 6 ವರ್ಷಗಳ ಅವಧಿಯಲ್ಲಿ ಸೆಕೆಂಡರಿ ದರ್ಜೆಯಲ್ಲಿ ಪ್ರೌಢಶಾಲೆಗಿಂತ ಕಡಿಮೆ ಇಲ್ಲದ ನಿರ್ಧಿಷ್ಟ ಪಡಿಸಿದಂತಹ ರಾಜ್ಯದೊಳಗಿನ ಯಾವುದೇ, ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಟ್ಟು ಕನಿಷ್ಠ 3 ವರ್ಷ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ. ಅರ್ಜಿಯೊಂದಿಗೆ ಸಂಸ್ಥೆಯಿAದ ಅನುಬಂಧ-2ರಲ್ಲಿ ಪಡೆದ ಪ್ರಮಾಣ ಪತ್ರ ಲಗತ್ತಿಸಬೇಕು ಎಂದು ತಿಳಿಸಿದರು.

ಈ ವೇಳೆ ರಾಯಚೂರು ತಹಶಿಲ್ದಾರ್ ಸುರೇಶ್ ವರ್ಮ ಅವರು ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ, ಮತದಾನದ ಮೂಲಕ ಅರ್ಹರ ಆಯ್ಕೆಗೆ ಅನುಕೂಲ ಕಲ್ಪಿಸುವ ಚುನಾವಣೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಇದನ್ನು ಅರಿಯಬೇಕು. ಶಿಕ್ಷಕರ ಕ್ಷೇತ್ರದ ಮತದಾರರಾದಲ್ಲಿ ತಾವು ಮತದಾನಕ್ಕೆ ಅರ್ಹರಾಗಿ, ಸದನದಲ್ಲಿ ಶಿಕ್ಷಕರ ಧ್ವನಿಯಾಗಲು ತಾವು ಇಚ್ಛಿಸುವ ಪ್ರತಿನಿಧಿಯ ಆಯ್ಕೆಗೆ ಮತದಾನಕ್ಕೆ ಅವಕಾಶ ಸಿಗಲಿದೆ ಎಂದು ಸಲಹೆ ಮಾಡಿದರು.

ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಬಿ.ಹೆಚ್.ರಮೇಶ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಡಳಿತ ಅಧಿಕಾರಿ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ರಾಯಚೂರು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಬಿ.ಬಡಿಗೇರ, ರಿಮ್ಸ್ ಸಂಸ್ಥೆಯ ಹೆಚ್ಚುವರಿ ಪ್ರಾಂಶುಪಾಲರಾದ ಮಂಜುನಾಥ, ಔಷಧ ವಿಭಾಗದ ಹೆಚ್‌ಒಡಿ ಡಾ.ಬಸವರಾಜ ಎಮ್.ಪಾಟೀಲ್, ಔಷಧ ವಿಭಾಗದ ಹೆಚ್ಚುವರಿ ಅಧಿಕಾರಿ ಡಾ.ಅರವಿಂದ ಸಂಗಾವಿ, ಶಿಶು ಅಭಿವೃದ್ಧಿ ಅಧಿಕಾರಿ ಮಂಜುನಾಥ, ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೋಸಗಿ, ಮತದಾರ ಸಾಕ್ಷರತಾ ಕ್ಲಬ್ ನ ನೋಡಲ್ ಅಧಿಕಾರಿ ಡಾ.ದಂಡಪ್ಪ ಬಿರಾದಾರ, ಚುನಾವಣಾ ಮಾಸ್ಟರ್ ಟ್ರೈನರ್ ಸದಾಶಿವಪ್ಪ, ಡಾ.ದಂಡಪ್ಪ ಬಿರಾದಾರ್ ಸೇರಿದಂತೆ ಇತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande