
ನವದೆಹಲಿ, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಅಕ್ಟೋಬರ್ 31 ರಂದು ನಡೆಯಲಿರುವ ‘ಏಕತಾ ಓಟ’ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮಜಯಂತಿ ಅಂಗವಾಗಿ ಆಯೋಜಿಸಲಿರುವ ಈ ಓಟವು ದೇಶದ ಏಕತೆ, ಅಖಂಡತೆ ಮತ್ತು ರಾಷ್ಟ್ರಭಕ್ತಿಯ ಸಂಕೇತವಾಗಿದೆ. ಏಕತಾ ಓಟದಲ್ಲಿ ಭಾಗವಹಿಸಿ, ಒಗ್ಗಟ್ಟಿನ ಮನೋಭಾವವನ್ನು ಆಚರಿಸಿ. ಸರ್ದಾರ್ ಪಟೇಲ್ ಅವರ ಅಖಂಡ ಭಾರತದ ದೃಷ್ಟಿಕೋನವನ್ನು ಗೌರವಿಸೋಣ, ಎಂದು ಪ್ರಧಾನ ಮಂತ್ರಿ ಸಾಮಾಜಿಕ ಮಾಧ್ಯಮದಲ್ಲಿ ಕರೆ ನೀಡಿದ್ದಾರೆ.
ದೇಶದ ಎಲ್ಲಾ ರಾಜ್ಯಗಳಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ತಯಾರಿ ನಡೆಯುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕರು ಮತ್ತು ಹಲವಾರು ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa