ಅ.೨೯ರಂದು ಬಿಹಾರ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ
ಪಾಟ್ನಾ, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ವೇಗ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಅಕ್ಟೋಬರ್ 29ರಂದು ಸಕ್ರಾ ಮತ್ತು ದರ್ಭ
Campaign


ಪಾಟ್ನಾ, 27 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ವೇಗ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಅಕ್ಟೋಬರ್ 29ರಂದು ಸಕ್ರಾ ಮತ್ತು ದರ್ಭಂಗಾದಲ್ಲಿ ಜಂಟಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಹಾರ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ರಾಜೇಶ್ ರಾಥೋಡ್ ಅವರು ಸೋಮವಾರ ಈ ಮಾಹಿತಿ ನೀಡಿ, ರಾಹುಲ್ ಗಾಂಧಿ ಈ ಚುನಾವಣಾ ಅವಧಿಯಲ್ಲಿ ಬಿಹಾರಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿಗೆ ಎಂದರು.

ಅವರು ಸಕ್ರಾ ಮೀಸಲು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ್ ರಾಮ್ ಪರವಾಗಿ ಮೊದಲ ಸಭೆ ನಡೆಸಲಿದ್ದು, ನಂತರ ದರ್ಭಂಗಾದಲ್ಲಿ ಮಹಾಮೈತ್ರಿಕೂಟ ಅಭ್ಯರ್ಥಿಗಳ ಪರವಾಗಿ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande