ಸಮೀಕ್ಷೆ ಅವಧಿಯಲ್ಲಿ ಶಿಕ್ಷಕರ ಅಪಘಾತ, ಸೂಕ್ತ ಪರಿಹಾರಕ್ಕೆ ಕ್ರಮ : ಸಚಿವ ಲಾಡ್
ಧಾರವಾಡ, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಅಪಘಾತಕ್ಕೊಳಗಾದ ಶಿಕ್ಷಕರಿಗೆ ಸರಕಾರದಿಂದ ಪರಿಹಾರ ಹಾಗೂ ಅಗತ್ಯ ಸೌಲಭ್ಯ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭರವಸೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿ
Lad


ಧಾರವಾಡ, 27 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಅಪಘಾತಕ್ಕೊಳಗಾದ ಶಿಕ್ಷಕರಿಗೆ ಸರಕಾರದಿಂದ ಪರಿಹಾರ ಹಾಗೂ ಅಗತ್ಯ ಸೌಲಭ್ಯ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭರವಸೆ ನೀಡಿದರು.

ಜಿಲ್ಲಾ ಪಂಚಾಯತಿಯಲ್ಲಿ ಶಿಕ್ಷಕರ ಸಂಘದ ಮನವಿ ಸ್ವೀಕರಿಸಿದ ಅವರು, ಗಾಯಗೊಂಡ ಶಿಕ್ಷಕರಿಗೆ ವೈದ್ಯಕೀಯ ರಜೆ ಮತ್ತು ವೆಚ್ಚ ಮಂಜೂರಾತಿ ಕುರಿತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾಹಿತಿ ನೀಡಿ, ಮೂವರು ಶಿಕ್ಷಕರು ಸಮೀಕ್ಷೆ ಸಂದರ್ಭದಲ್ಲಿ ಗಾಯಗೊಂಡಿದ್ದು, ಅವರಿಗೆ ವೈದ್ಯಕೀಯ ನೆರವು ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande