
ಮುನಿರಾಬಾದ, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಪ್ಪಳ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಕೊಪ್ಪಳರವರು ಮತ್ತು ಸಮುದಾಯ ಆರೋಗ್ಯ ಕೇಂದ್ರ ಮುನಿರಾಬಾದ್ ರವರ ಸಂಯುಕ್ತಾಶ್ರಯದಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಕ್ಟೋಬರ್ 24 ರಂದು ತಂಬಾಕು ಮುಕ್ತ ಯುವ ಅಭಿಯಾನ 3.0 (ವಿಶೇಷ 60 ದಿನಗಳ ಅಭಿಯಾನ) ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಐಇಸಿ ಪ್ರಚಾರ ಹಾಗೂ ಗರ್ಭಿಣಿಯರಿಗೆ, ತಾಯಿ ಮತ್ತು ಮಗುವಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳು, ಕೋಟ್ಪಾ ಕಾಯ್ದೆ-2003 ರ ಬಗ್ಗೆ ಹಾಗೂ ತಂಬಾಕು ಸೇವನೆಯನ್ನು ತೇಜಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿಯನ್ನು ಮೂಡಿಸಲಾಯಿತು.
ಈ ಸಂದರ್ಭ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತಂಡದ ಸಂಗಪ್ಪ ಮಮಟಗೇರಿ, ಜಿಲ್ಲಾ ಸಲಹೆಗಾರರಾದ ಸರಸ್ವತಿ, ಡಾ.ರಾಜಶೇಖರ ಎಸ್, ಡಾ. ರಾಜಲಕ್ಷಿö್ಮ, ಡಾ.ಜ್ಯೋತಿ, ಆಸ್ಪತ್ರೆಯ ಸಿಬ್ಬಂದಿಗಳು, ಸಮಾಜ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್