ಅಪರಿಚಿತ ವ್ಯಕ್ತಿಯ ಶವ ಪತ್ತೆ
ವಿಜಯಪುರ, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಹನುಮಾನ್ ದೇವಸ್ಥಾನದ ಬಳಿ ಸಿಕ್ಕಿದೆ. ಸುಮಾರು 50-55 ವಯಸ್ಸಿನ ಅಪರಿಚಿತ ವ್ಯಕ್ತಿ ಶವ ಸಿಕ್ಕಿದೆ. ಅಪರಿಚಿತ ವ್ಯಕ್ತಿ ಯಾವುದೋ ಕಾಯಿಲೆಯಿಂದ ಮೃತಪ
ಅಪರಿಚಿತ ವ್ಯಕ್ತಿಯ ಶವ ಪತ್ತೆ


ವಿಜಯಪುರ, 27 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಹನುಮಾನ್ ದೇವಸ್ಥಾನದ ಬಳಿ ಸಿಕ್ಕಿದೆ.

ಸುಮಾರು 50-55 ವಯಸ್ಸಿನ ಅಪರಿಚಿತ ವ್ಯಕ್ತಿ ಶವ ಸಿಕ್ಕಿದೆ. ಅಪರಿಚಿತ ವ್ಯಕ್ತಿ ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಆತನ ಮೇಲೆ ಬಿಳಿ ಬಣ್ಣದ ಫುಲ್ ತೋಳಿನ ಅಂಗಿ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾನೆ. ಈ ಕುರಿತು ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತನ ಕುರಿತು ಮಾಹಿತಿ ತಿಳಿದ್ರೆ ಹೆಚ್ಚಿನ ಮಾಹಿತಿಗಾಗಿ ಗಾಂಧಿಚೌಕ್ ಪೊಲೀಸ ಠಾಣೆಯ 08452 250033ಗೆ ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande