ಕೊಪ್ಪಳ - ನಾನಾ ಸಮಿತಿ ಕರ್ತವ್ಯ ನಿರ್ವಹಿಸಬೇಕು : ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಕೊಪ್ಪಳ, 27 ಅಕ್ಟೋಬರ್ (ಹಿ.ಸ.) ಆ್ಯಂಕರ್ : ಉಪ ಲೋಕಾಯುಕ್ತರು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಕಾರ್ಯಕ್ರಮಗಳ ನಿರ್ವಹಣೆಗಾಗಿ ರಚಿಸಿದ ನಾನಾ ಸಮಿತಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಅವರು ಸೋಮವಾರ ಜಿಲ್ಲಾ
ಕೊಪ್ಪಳ - ವಿವಿಧ ಸಮಿತಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ


ಕೊಪ್ಪಳ - ವಿವಿಧ ಸಮಿತಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ


ಕೊಪ್ಪಳ - ವಿವಿಧ ಸಮಿತಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು: ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ


ಕೊಪ್ಪಳ, 27 ಅಕ್ಟೋಬರ್ (ಹಿ.ಸ.)

ಆ್ಯಂಕರ್ : ಉಪ ಲೋಕಾಯುಕ್ತರು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಕಾರ್ಯಕ್ರಮಗಳ ನಿರ್ವಹಣೆಗಾಗಿ ರಚಿಸಿದ ನಾನಾ ಸಮಿತಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಗೌರವಾನ್ವಿತ ಉಪ ಲೋಕಾಯುಕ್ತರು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಚಿಸಿದ ವಿವಿಧ ಸಮಿತಿಯ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ವೇದಿಕೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸರಿಯಾದ ವ್ಯವಸ್ಥೆ ಮಾಡಬೇಕು. ಟೇಬಲ್, ಕುರ್ಚಿ, ಮೈಕ್ ಮತ್ತು ಬ್ಯಾನರ್‌ಗಳನ್ನು ಸರಿಯಾಗಿ ಹಾಕಬೇಕು. ಸಾರ್ವಜನಿಕರ ಅಹವಾಲು ಮತ್ತು ಸ್ವೀಕೃತಿ ಅರ್ಜಿಗಳನ್ನು ಪಡೆಯಲು ವಿಶೇಷ ವ್ಯವಸ್ಥೆ ಮಾಡಬೇಕು ಎಂದರು.

ಉಪಲೋಕಾಯುಕ್ತರು ಅಕ್ಟೋಬರ್ 29 ರಿಂದ 31 ರವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದು, ಅಕ್ಟೋಬರ್ 29 ರಂದು ನಾನಾ ಸ್ಥಳಗಳ ಭೇಟಿ ಮತ್ತು ಅಕ್ಟೋಬರ್ 30 ಮತ್ತು 31 ರಂದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವರು. ಅವರ ಪ್ರವಾಸದ ಸಂದರ್ಭದಲ್ಲಿ ಸಾರಿಗೆ ಸಮಿತಿಯವರು ಮಾನ್ಯರಿಗೆ ಸರಿಯಾದ ವಾಹನಗಳ ವ್ಯವಸ್ಥೆ ಮಾಡಬೇಕೆಂದು ಹೇಳಿದರು.

ಜಿಲ್ಲೆಯ ನಾನಾ ಕಡೆಯಿಂದ ಬರುವ ಜನರಿಗೆ ತೊಂದರೆಯಾಗದ0ತೆ ಅವರಿಗೆ ಸರಿಯಾದ ಆಸನ ವ್ಯವಸ್ಥೆ ಹಾಗೂ ಕುಡಿಯುವ ನೀರು ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಬೇಕು. ಸ್ವಾಗತ ಸಮಿತಿ, ವೇದಿಕೆ, ವಾಹನ, ವಸತಿ, ಪ್ರಚಾರ, ಆಹಾರ, ಸಾರ್ವಜನಿಕ ಅಹವಾಲು, ಭದ್ರತಾ ಸಮಿತಿಗಳು ಸೇರಿದಂತೆ ಇತರೆ ವಿವಿಧ ಸಮಿತಿಯ ಸದಸ್ಯರು ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಹೇಳಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಆರ್. ಹೇಮಂತಕುಮಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಹೇಮಂತ್, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಡಿ. ಮಂಜುನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande