
ಬೆಂಗಳೂರು, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಚಕ್ಷಣಾ ಜಾಗೃತಿ ಸಪ್ತಾಹದ ಅಂಗವಾಗಿ ಇಂದು ಬೆಂಗಳೂರಿನ ವಿಭಾಗೀಯ ರೈಲ್ವೆ ಕಾರ್ಯಾಲಯದಲ್ಲಿ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಕುಮಾರ್ ಸಿಂಗ್ ರವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸಮಗ್ರತೆಯ ಪ್ರತಿಜ್ಞೆಯನ್ನು ಬೋಧಿಸಿದರು.
ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕರುಗಳಾದ ಪರೀಕ್ಷಿತ್ ಮೋಹನ್‌ಪೂರಿಯಾ, ಪ್ರವೀಣ್ ಕಾತರಕಿ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಶ್ರೀಮತಿ ಉಮಾ ಶರ್ಮಾ ಮತ್ತಿತರರು ಉಪಸ್ಥಿತರಿದ್ದರು.
ಈ ವರ್ಷದ ವಿಚಕ್ಷಣಾ ಜಾಗೃತಿ ಸಪ್ತಾಹದ ಧ್ಯೇಯವಾಕ್ಯವು ʼವಿಚಕ್ಷಣತೆ : ನಮ್ಮ ಸಾಮೂಹಿಕ ಜವಾಬ್ದಾರಿʼ ಎನ್ನುವುದಾಗಿದ್ದು ಇದು ಭ್ರಷ್ಙಾಚಾರದ ವಿರುದ್ಧದ ಹೋರಾಟ ಕೇವಲ ಸಂಸ್ಥೆಗಳ ಜವಾಬ್ದಾರಿಯಷ್ಟೆ ಅಲ್ಲ. ಇದು ಸಾಮೂಹಿಕ ಕರ್ತವ್ಯವಾಗಿದ್ದು ಜೀವನದ ಎಲ್ಲ ಕ್ಷೇತ್ರಗಳಲ್ಲಿ ನೈತಿಕತೆ, ಪ್ರಾಮಾಣಿಕತೆ, ಮತ್ತು ಹೊಣೆಗಾರಿಕೆಯ ಮೌಲ್ಯಗಳನ್ನು ಎತ್ತಿಹಿಡಿಯಲು ಎಲ್ಲ ನಾಗರಿಕರಿಗೆ ಕರೆ ನೀಡುತ್ತದೆ ಎಂದು ಬೆಂಗಳೂರು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಪ್ರಾಣೇಶ ಕೆ.ಎನ್.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa