
ನವದೆಹಲಿ, 27 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೇಂದ್ರ ಆರೋಗ್ಯ ಸಚಿವ ಜಗತ್ ಪ್ರಕಾಶ್ ನಡ್ಡಾ ಅವರು ಜಾಗರೂಕತೆಯು ಕೇವಲ ವಾರದ ಕಾರ್ಯಕ್ರಮವಾಗದೇ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಬೆಳೆಸುವ ಸಾಂಸ್ಥಿಕ ಅಭ್ಯಾಸವಾಗಬೇಕು ಎಂದು ಹೇಳಿದರು.
ನವದೆಹಲಿ ನಿರ್ಮಾಣ್ ಭವನದಲ್ಲಿ ನಡೆದ ವಿಜಿಲೆನ್ಸ್ ಜಾಗೃತಿ ವಾರ ಕಾರ್ಯಕ್ರಮದಲ್ಲಿ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಮಗ್ರತೆಯ ಪ್ರತಿಜ್ಞೆ ಬೋಧಿಸಿದರು. “ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಸರಳ ಪಟ್ಟಿ ರೂಪಿಸಬೇಕು, ತರಬೇತಿ ಮತ್ತು ಸಾಮರ್ಥ್ಯ ವೃದ್ಧಿ ನಿಯಮಿತವಾಗಿರಬೇಕು” ಎಂದು ನಡ್ಡಾ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಸಮಗ್ರತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ತತ್ವಗಳನ್ನು ಪಾಲಿಸುವ ಪ್ರತಿಜ್ಞೆ ಸ್ವೀಕರಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa