ಅನ್ನದಾತರಿಗಾಗಿ ಜನ್ಮ‌ದಿನ ಆಚರಣೆ ರದ್ದು ಮಾಡಿದ ವಿಪ ಸದಸ್ಯ ಪಾಟೀಲ್
ವಿಜಯಪುರ, 27 ಅಕ್ಟೋಬರ್ (ಹಿ.ಸ.) ಆ್ಯಂಕರ್ : ಅತೀವಷ್ಛಿ ಮತ್ತು ಪ್ರವಾಹದಿಂದಾಗಿ ಅನ್ನದಾತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಈ ಬಾರಿ ಅಕ್ಟೋಬರ್ 31 ರಂದು ಶುಕ್ರವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳದಿರಲು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ನಿರ್ಧರಿಸಿದ್ದಾರೆ. ರಾಜ್ಯದಲ್ಲಿ ಅತೀವೃಷ್ಠಿ ಮತ್ತ
ಪಾಟೀಲ


ವಿಜಯಪುರ, 27 ಅಕ್ಟೋಬರ್ (ಹಿ.ಸ.)

ಆ್ಯಂಕರ್ : ಅತೀವಷ್ಛಿ ಮತ್ತು ಪ್ರವಾಹದಿಂದಾಗಿ ಅನ್ನದಾತರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಈ ಬಾರಿ ಅಕ್ಟೋಬರ್ 31 ರಂದು ಶುಕ್ರವಾರ ತಮ್ಮ ಜನ್ಮದಿನ ಆಚರಿಸಿಕೊಳ್ಳದಿರಲು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ನಿರ್ಧರಿಸಿದ್ದಾರೆ.

ರಾಜ್ಯದಲ್ಲಿ ಅತೀವೃಷ್ಠಿ ಮತ್ತು ಪ್ರವಾಹದಿಂದಾಗಿ ರೈತಾಪಿ ಜನರು ಸಂಕಷ್ಟದಲ್ಲಿದ್ದಾರೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆ ಮತ್ತು ಪ್ರವಾಹದಿಂದಾಗಿ ಹಲವಾರು ಗ್ರಾಮಗಳಲ್ಲಿ ಸಮಸ್ಯೆಗಳಾಗಿವೆ. ಆಸ್ತಿ-ಪಾಸ್ತಿ ಮತ್ತು ಬೆಳೆಯೂ ಹಾನಿಯಾಗಿದೆ.

ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಜನ್ಮದಿನ ಆಚರಿಸಿಕೊಳ್ಳಲು ಮನಸ್ಸು ಒಪ್ಪುತ್ತಿಲ್ಲ. ಹೀಗಾಗಿ ಇದೇ ಅಕ್ಟೋಬರ್ 31 ರಂದು ಶುಕ್ರವಾರ ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಬೆಂಬಲಿಗರು, ಅಭಿಮಾನಿಗಳು, ಹಿತೈಸಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಸುನೀಲಗೌಡ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande