ಅ. 30 ರಂದು ಕೊಪ್ಪಳದಲ್ಲಿ ನೇರ ಸಂದರ್ಶನ
ಕೊಪ್ಪಳ, 27 ಅಕ್ಟೋಬರ್ (ಹಿ.ಸ.) ಆ್ಯಂಕರ್ : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅ.30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಈ ನೇರ ಸಂದರ್ಶನದಲ್ಲಿ ಬೆಂಗಳೂರ
ಅ. 30 ರಂದು ಕೊಪ್ಪಳದಲ್ಲಿ ನೇರ ಸಂದರ್ಶನ


ಕೊಪ್ಪಳ, 27 ಅಕ್ಟೋಬರ್ (ಹಿ.ಸ.)

ಆ್ಯಂಕರ್ : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅ.30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಈ ನೇರ ಸಂದರ್ಶನದಲ್ಲಿ ಬೆಂಗಳೂರಿನ ಪೋನೋರೆಂಜ್ ಲಿಮಿಟೆಡ್ ಕಂಪನಿಯು ತಮ್ಮಲ್ಲಿನ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದು, ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.

ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್, ಐ.ಟಿ.ಐ (ಆಲ್ ಟ್ರೇಡ್ಸ್), ಪಿ.ಯು.ಸಿ ಅಥವಾ ತತ್ಸಮಾನ, ಮೇಲ್ಪಟ್ಟ ವಿದ್ಯಾಭ್ಯಾಸ ಹೊಂದಿರುವ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ನೇರ ಸಂದರ್ಶನದಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವ0ತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande