
ಬೆಂಗಳೂರು, 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆರ್‌ಎಸ್‌ಎಸ್ ಸಂಘಟನೆ ಗುರಿಯಾಗಿಸಿ ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ಮುಂಚಿತ ಅನುಮತಿ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ , ಹೈಕೋರ್ಟ್ ತಡೆಯಾಜ್ಞೆ ತೆರವುಗೊಳಿಸಲು ಸರ್ಕಾರ ಕಾನೂನು ಹೋರಾಟ ನಡೆಸಲಿದೆ. ನಾವು ಈ ತೀರ್ಪಿಗೆ ವಿರುದ್ಧವಾಗಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿ, ಸರ್ಕಾರ ಈ ವಿಷಯವನ್ನು ದ್ವಿಸದಸ್ಯ ಪೀಠದ ಮುಂದೆ ಮೇಲ್ಮನವಿ ರೂಪದಲ್ಲಿ ಇಡಲು ನಿರ್ಧರಿಸಿದೆ. ಇದು ಸರ್ಕಾರಕ್ಕೆ ಹಿನ್ನಡೆಯಲ್ಲ, ಕಾನೂನಾತ್ಮಕ ಕ್ರಮದ ಭಾಗ ಮಾತ್ರ,ಎಂದು ಸ್ಪಷ್ಟಪಡಿಸಿದ್ದಾರೆ.
ಈ ಆದೇಶದ ಅಡಿಯಲ್ಲಿ ಸರ್ಕಾರಿ ಆಸ್ತಿಗಳು, ಪಾರ್ಕ್‌ಗಳು, ಶಾಲೆ-ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳು ಅಥವಾ ಸಂಘಟನೆಗಳು ಕಾರ್ಯಕ್ರಮ ನಡೆಸಲು ಮುಂಚಿತ ಅನುಮತಿ ಪಡೆಯುವುದು ಕಡ್ಡಾಯವಾಗಿತ್ತು. ಆದರೆ, ಹೈಕೋರ್ಟ್ ತಾತ್ಕಾಲಿಕವಾಗಿ ಈ ನಿಯಮಕ್ಕೆ ತಡೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa