ಬಳ್ಳಾರಿ ಮಹಾನಗರ ಪಾಲಕೆ ಚುನಾವಣೆ
ಬಳ್ಳಾರಿ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳ ಚುನಾವಣೆಗಳು ನವೆಂಬರ್ 15 ರ ಶನಿವಾರ ನಡೆಸಲು ಪ್ರಾದೇಶಿಕ ಆಯುಕ್ತರು ನಿರ್ಧರಿಸಿದ್ದಾರೆ. ಈ ಕುರಿತು ಆದೇಶ ಪ್ರಕಟಿಸಿರುವ ಪ್ರಾದೇಶಿಕ ಆಯುಕ್ತರು, ಅಂದು ಬೆಳ
ಬಳ್ಳಾರಿ ಮಹಾನಗರ ಪಾಲಕೆ ಚುನಾವಣೆ


ಬಳ್ಳಾರಿ, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳ ಚುನಾವಣೆಗಳು ನವೆಂಬರ್ 15 ರ ಶನಿವಾರ ನಡೆಸಲು ಪ್ರಾದೇಶಿಕ ಆಯುಕ್ತರು ನಿರ್ಧರಿಸಿದ್ದಾರೆ.

ಈ ಕುರಿತು ಆದೇಶ ಪ್ರಕಟಿಸಿರುವ ಪ್ರಾದೇಶಿಕ ಆಯುಕ್ತರು, ಅಂದು ಬೆಳಗ್ಗೆ 10 ಗಂಟೆಗೆ ನಾಮಪತ್ರಗಳ ಸಲ್ಲಿಕೆ, ಪರಿಶೀಲನೆ ಮತ್ತು ಹಿಂದಕ್ಕೆ ಪಡೆಯಲು ಅವಕಾಶ. ಅವಶ್ಯಕತೆ ಇದ್ದಲ್ಲಿ ಮಧ್ಯಾಹ್ನ 12.30 ಕ್ಕೆ ಚುನಾವಣೆ. ಸಂಬಂಧಪಟ್ಟ ಮತದಾರರಿಗೆ ನೋಟೀಸ್ ಜಾರಿ ಮಾಡಬೇಕು ಎಂದು ಅವರು ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande