ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ವಿವಾದ : ಶಾಂತಿ ಸಭೆ ಅರ್ಧಕ್ಕೆ ಮೊಟಕು
ಕಲಬುರಗಿ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನದ ವಿವಾದದಿಂದ ಜಿಲ್ಲೆಯಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಭೆ ಆಯೋಜಿಸಲಾಗಿ
Peace meeting


ಕಲಬುರಗಿ, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನದ ವಿವಾದದಿಂದ ಜಿಲ್ಲೆಯಲ್ಲಿ ಉದ್ವಿಗ್ನತೆ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಭೆ ಆಯೋಜಿಸಲಾಗಿತ್ತು. ಆದರೆ ಸಭೆಯ ವೇಳೆ ನಾನಾ ಸಂಘಟನೆಗಳ ಪ್ರತಿನಿಧಿಗಳ ನಡುವೆ ವಾಗ್ವಾದ ಉಂಟಾಗಿ ಸಭೆ ಅರ್ಧಕ್ಕೇ ಮೊಟಕುಗೊಂಡಿದೆ.

ಸಭೆಗೆ ಆರ್‌ಎಸ್‌ಎಸ್, ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ಸ್ ಹಾಗೂ ಛಲವಾದಿ ಮಹಾಸಭಾ ಸಂಘಟನೆಗಳ ಪ್ರತಿನಿಧಿಗಳನ್ನು ಆಹ್ವಾನಿಸಲಾಗಿತ್ತು. ಆದರೆ ಸಭೆಯಲ್ಲಿ ಒಮ್ಮತದ ನಿರ್ಧಾರ ಬರದೆ, ತೀವ್ರ ವಾಗ್ವಾದ ಉಂಟಾಯಿತು. “ಆರ್‌ಎಸ್‌ಎಸ್ ಲಾಠಿ ಬಿಟ್ಟು ಪಥಸಂಚಲನ ನಡೆಸಲಿ” ಎಂಬ ಇತರ ಸಂಘಟನೆಗಳ ಆಗ್ರಹಕ್ಕೆ ಆರ್‌ಎಸ್‌ಎಸ್ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ವಾಗ್ವಾದ ಉಲ್ಬಣಗೊಂಡು ಸಭೆ ಅರ್ಧಕ್ಕೆ ಮೊಟಕುಗೊಂಡಿದೆ.

ಸಭೆಯಲ್ಲಿ ಯಾವುದೇ ಒಮ್ಮತದ ತೀರ್ಮಾನ ಕೈಗೊಳ್ಳಲಾಗದ ಕಾರಣ ಕಲಬುರಗಿ ಜಿಲ್ಲಾಡಳಿತ ಎಲ್ಲ ಸಂಘಟನೆಗಳ ಲಿಖಿತ ಅಭಿಪ್ರಾಯಗಳನ್ನು ಸಂಗ್ರಹಿಸಿ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲು ನಿರ್ಧರಿಸಿದೆ. ಅಕ್ಟೋಬರ್ 30ರಂದು ಕಲಬುರಗಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಪಥಸಂಚಲನ ಕುರಿತು ನ್ಯಾಯಾಲಯದ ತೀರ್ಪಿನ ಮೇಲೆ ನಿರ್ಧಾರವಾಗಲಿದೆ.

ಈ ಘಟನೆಯು ಜಿಲ್ಲೆಯಲ್ಲಷ್ಟೇ ಅಲ್ಲ, ರಾಜ್ಯದ ರಾಜಕೀಯ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದ್ದು, ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನದ ಬಗ್ಗೆ ಜನರಲ್ಲಿ ಕುತೂಹಲ ಹೆಚ್ಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande