ಕನೆಕ್ಟ್-2025; ಪ್ರವಾಸೋದ್ಯಮ ಅವಕಾಶ
ಬಳ್ಳಾರಿ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ಪೋ-2025 ರ ಅಂಗವಾಗಿ ಕರ್ನಾಟಕ ಟೂರಿಸಂ ಸೊಸೈಟಿ ಅವರ ಸಹಯೋಗದಲ್ಲಿ ಅಕ್ಟೋಬರ್ 31 ರ ಶುಕ್ರವಾರ ಗದಗ ಜಿಲ್ಲೆಯ ಮಹಾತ್ಮಗಾಂಧಿ ಆರ್‍ಡಿಪಿಆರ್ ವಿಶ್ವವಿದ್ಯಾಲಯದಲ್ಲಿ `ಕನೆಕ್ಟ
ಕನೆಕ್ಟ್-2025; ಪ್ರವಾಸೋದ್ಯಮ ಅವಕಾಶ


ಬಳ್ಳಾರಿ, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಇಂಟರ್ ನ್ಯಾಷನಲ್ ಟ್ರಾವೆಲ್ ಎಕ್ಸ್ಪೋ-2025 ರ ಅಂಗವಾಗಿ ಕರ್ನಾಟಕ ಟೂರಿಸಂ ಸೊಸೈಟಿ ಅವರ ಸಹಯೋಗದಲ್ಲಿ ಅಕ್ಟೋಬರ್ 31 ರ ಶುಕ್ರವಾರ ಗದಗ ಜಿಲ್ಲೆಯ ಮಹಾತ್ಮಗಾಂಧಿ ಆರ್‍ಡಿಪಿಆರ್ ವಿಶ್ವವಿದ್ಯಾಲಯದಲ್ಲಿ `ಕನೆಕ್ಟ್-2025’ ನಡೆಯಲಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ್ ಅವರ ಅಧ್ಯಕ್ಷತೆವಹಿಸಲಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಈಗಾಗಲೇ ತೊಡಗಿಸಿಕೊಂಡಿರುವ ಭಾಗಿದಾರರು ಹಾಗೂ ಹೂಡಿಕೆದಾರರು ಪ್ರವಾಸೋದ್ಯಮ ಅಭಿವೃದ್ಧಿ ಪ್ರಯೋಜನ ಪಡೆಯುವವರು ಹಾಗೂ ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ ಪ್ರವಾಸೋದ್ಯಮ ಉತ್ಪನ್ನಗಳು ಮತ್ತು ಅನುಭವಗಳಲ್ಲಿ 25 ಯೋಜನೆ ಒಳಗೊಂಡಂತೆ ಚರ್ಚಿಸಿ, ಪ್ರವಾಸೋದ್ಯಮ ಯೋಜನೆಗಳಿಗೆ ಭಾಗಿದಾರರು ಹಾಗೂ ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತೆ ಅಗತ್ಯ ಮಾಹಿತಿ ಪಡೆಯಬಹುದು ಹಾಗೂ ತಮ್ಮ ಅಮೂಲ್ಯ ಸಲಹೆ-ಸೂಚನೆ ನೀಡಬಹುದು. ಆಸಕ್ತರು ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲೆಯ ಕಮಲಾಪುರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಬಳ್ಳಾರಿ ಜಿಲ್ಲೆಯ ಹಿರಿಯ ಪ್ರವಾಸಿ ಪ್ರವರ್ತಕರಾದ ಶ್ರೀಹರಿ ಮಾಸನೂರು (ಮೊ.7892722443) ಗೆ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande