ನಾನಾ ಯೋಜನೆಗಳಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದವರಿಗೆ ನಾನಾ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂ
ನಾನಾ ಯೋಜನೆಗಳಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಕೊಪ್ಪಳ, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2025-26 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಸಮುದಾಯದವರಿಗೆ ನಾನಾ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸುತ್ತಿದ್ದು, ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಸಾಂತ್ವನ ಯೋಜನೆ ಹಾಗೂ ಸಮುದಾಯ ಆಧಾರಿತ ತರಬೇತಿ ಯೋಜನೆಗಳಡಿ ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನವಾಗಿತ್ತು. ಅರ್ಜಿದಾರರ ಅನುಕೂಲಕ್ಕಾಗಿ ಈ ಮೂರು ಯೋಜನೆಗಳಿಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ಹಾಗೂ ಅರ್ಹ ಫಲಾನುಭವಿಗಳು ವೆಬ್‍ಸೈಟ್: kmdconline.karnataka.gov.in ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಫಲಾನುಭವಿಗಳು ರಾಜ್ಯದಲ್ಲಿ ಕನಿಷ್ಠ 10 ವರ್ಷ ವಾಸವಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ, ಸಾಂತ್ವನ ಯೋಜನೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 55 ವರ್ಷ ವಯೋಮಿತಿ ಒಳಗಿರಬೇಕು ಹಾಗೂ ಸಮುದಾಯ ಆಧಾರಿತ ತರಬೇತಿಗೆ ಅರ್ಜಿ ಸಲ್ಲಿಸಲು 18 ರಿಂದ 45 ವರ್ಷ ವಯೋಮಿತಿಯ ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಯೋಜನೆಗಳ ಕುರಿತಾದ ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ದೂ.ಸಂ: 08539-225008 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande