
ಕೊಪ್ಪಳ, 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ-ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 35 ಯೋಗ ತರಬೇತುದಾರರನ್ನು ವಾಕ್ ಇನ್ ಇಂಟರ್‍ವ್ಯೂವ್ ಮುಖಾಂತರ ಗೌರವಧನ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದೆ. ಒಂದು ವೇಳೆ ಖಾಲಿ ಹುದ್ದೆಗಳು ಭರ್ತಿಯಾಗದೇ ಇದ್ದಲ್ಲಿ ಭರ್ತಿಯಾಗುವವರೆಗೂ ಪ್ರತಿ ದಿನ 2026 ರ ಮಾರ್ಚ್ 31 ರವರೆಗೆ ವಾಕ್ ಇನ್ ಇಂಟರ್‍ವ್ಯೂವ್ ನಡೆಸಲಾಗುವುದು. ಆಸಕ್ತರು ಜಿಲ್ಲಾ ಸರ್ವೇಕ್ಷಣಾ ಘಟಕ, ಮೊದಲನೇ ಮಹಡಿ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇಲ್ಲಿ ಖುದ್ದಾಗಿ ಅರ್ಜಿ ನಮೂನೆ ಪಡೆದು ತಮ್ಮ ಸೂಕ್ತ ದಾಖಲಾತಿಗಳ ಸಹಿತ ಅರ್ಜಿ ಸಲ್ಲಿಸಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಮಯದಲ್ಲಿ ಮೇಲಿನ ವಿಳಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್