
ಹೊಸಪೇಟೆ, 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮೇದಾರ ಪರಿಶೀಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಗೆ ಪರಿಶಿಷ್ಟ ಪಂಗಡದ 05 ಜನ ಮೇದಾರ ಸಮುದಾಯದ ಅಭ್ಯರ್ಥಿಗಳನ್ನು ಎರಡು ವರ್ಷಗಳ ಅವಧಿಗೆ ನಾಮ ನಿರ್ದೇಶನ ಸದಸ್ಯರನ್ನು ನೇಮಕ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರವಿಕುಮಾರ ಅವರು ತಿಳಿಸಿದ್ದಾರೆ.
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ನವೆಂಬರ್.11 ರೊಳಗಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9686062843 ಸಂಖ್ಯೆಗೆ ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್