ಕನ್ನಡ ರಾಜ್ಯೋತ್ಸವ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿಗಳ ಸೂಚನೆ
ಹಾಸನ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,
Meeting


ಹಾಸನ, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಲು ಹಾಗೂ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳ ತಾಲೀಮು ನಡೆಸಿ, ಸರ್ಕಾರಿ ಶಾಲಾ ಮಕ್ಕಳಿಗೆ ಹೆಚ್ಚಿನ ಭಾಗವಹಿಸುವ ಅವಕಾಶ ಕಲ್ಪಿಸಲು ಸೂಚಿಸಿದರು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆ, ದೀಪಾಲಂಕಾರ, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ ಮೊದಲಾದ ಮೂಲಭೂತ ಸೌಲಭ್ಯಗಳ ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದರು.

ಈ ಬಾರಿ 2500 ಅಡಿ ಉದ್ದದ ಕನ್ನಡ ಬಾವುಟ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಕ್ರೀಡಾಂಗಣದವರೆಗೆ ನಡೆಯಲಿದೆ ಎಂದು ತಿಳಿಸಿ, ವಿದ್ಯಾರ್ಥಿಗಳ ಸುರಕ್ಷತೆಗೆ ವಿಶೇಷ ಗಮನ ಹರಿಸಲು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಾಬು, ಉಪ ವಿಭಾಗಾಧಿಕಾರಿ ಜಗದೀಶ್ ಗಂಗಣ್ಣನವರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande