
ಕೊಪ್ಪಳ, 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಅಕ್ಟೋಬರ್ 30 ರಂದು ಸಾರ್ವಜನಿಕರ ದೂರು ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸುವ ದೂರುದಾರರು ಅಥವಾ ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಲು ಸೂಚಿಸಿದೆ.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಅಕ್ಟೋಬರ್ 30 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.
ಆದ್ದರಿಂದ ಸಾರ್ವಜನಿಕರು ಅಥವಾ ಅರ್ಜಿದಾರರು ನಿಗದಿತ ದಿನದಂದು ತಮ್ಮ ದೂರು ಅರ್ಜಿ ಹಾಗೂ ಅಗತ್ಯ ದಾಖಲೆಗಳು, ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ಖುದ್ದು ಹಾಜರಾಗಿ ಉಪಲೋಕಾಯುಕ್ತರಿಗೆ ದೂರು ಸಲ್ಲಿಸಬೇಕು. ನಮೂನೆ 1 ಮತ್ತು 2 ಗಳನ್ನು ಅರ್ಜಿದಾರರಿಗೆ ಸ್ಥಳದಲ್ಲಿಯೇ ವಿತರಣೆ ಮಾಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತದ ರಾಯಚೂರು ಕಚೇರಿಯ ಪೊಲೀಸ್ ಅಧೀಕ್ಷಕರಾದ ಸತೀಶ ಎಸ್.ಚಿಟಗುಬ್ಬಿ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್