ಪಂಚ ಗ್ಯಾರಂಟಿ, ವಿನಾ ವಿಳಂಬ ಸಲ್ಲದು : ಸಚಿವ ಎಚ್.ಕೆ.ಪಾಟೀಲ್
ಗದಗ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸದುದ್ದೇಶ ಹೊಂದಿದ್ದು ಈ ಯೋಜನೆಗಳ ಸೌಲಭ್ಯ ವಿತರಣೆಯಲ್ಲಿ ವಿನಾಕಾರಣ ವಿಳಂಬವಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು
ಫೋಟೋ


ಗದಗ, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸರ್ಕಾರದಿಂದ ಜಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸದುದ್ದೇಶ ಹೊಂದಿದ್ದು ಈ ಯೋಜನೆಗಳ ಸೌಲಭ್ಯ ವಿತರಣೆಯಲ್ಲಿ ವಿನಾಕಾರಣ ವಿಳಂಬವಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಸಭೆಯ ಅಧ್ಯಕ್ಷರಾದ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತು ಪ್ರಗತಿ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನವು ಆಡಳಿತ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬಹುದೊಡ್ಡ ಬದಲಾವಣೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನವು ಬಡಜನರ ಸೇವೆ ಮಾಡಲು ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಯ ಮಹತ್ವವನ್ನು ಅರ್ಥೆಸಿಕೊಳ್ಳುವುದು ಹಾಗೂ ಅವುಗಳ ಪೂರ್ಣ ಪ್ರಮಾಣದ ಅನುಷ್ಟಾನಕ್ಕಾಗಿ ಇಲಾಖಾಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಆಸಕ್ತಿಯಿಂದ ಕಾರ್ಯನಿರ್ವಹಿಸುವುದು ಮುಖ್ಯವಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಶ್ರದ್ಧೆಯಿಂದ ಕೆಲಸ ಮಾಡಬೇಕಾಗುತ್ತದೆ. ಬಡಜನರ ಸೇವೆ ಪವಿತ್ರ ಕೆಲಸವಾಗಿದ್ದು ಯೋಜನೆಗಳ ಸೌಲಭ್ಯಗಳು ನಿಗದಿತ ಅವಧಿಯಲ್ಲಿಯೇ ತಲುಪಿದಾಗ ಅದರ ಸಾರ್ಥಕತೆ ಕಾಣಬಹುದಾಗಿದೆ ಎಂದರು.

ಅರ್ಹ ಕುಟುಂಬಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಮಾಸಿಕ 5,000 ರೂ.ಗಳು ದೊರೆಯುತ್ತಿದ್ದು ಪ್ರತಿ ವರ್ಷಕ್ಕೆ 60,000 ರೂ.ಗಳು ದೊರೆಯುತ್ತಿದೆ. ಬಡಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮತ್ತು ಮೂಲಭೂತ ಸೌಕರ್ಯಗಳನ್ನು ಪಡೆಯಲು ಸಹಾಯವಾಗಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಪ್ರಾಮಾಣಿಕತೆಯಿರಬೇಕು. ಆಡಳಿತದಲ್ಲಿ ಪಾರದರ್ಶಕತೆ ಅವಶ್ಯವಾಗಿದ್ದು ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಯೋಜನೆಗಳ ಸೌಲಭ್ಯ ಅರ್ಹರಿಗೆ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳ ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ನಿರ್ದೇಶನ ನೀಡಿದರು.

ಗದಗ ಜಿಲ್ಲಾ ಮಟ್ಟದ ಪಂಚಗ್ಯಾರ0ಟಿ ಯೋಜನಾ ಸಮಿತಿ ಅಧ್ಯಕ್ಷರಾದ ಬಿ.ಬಿ.ಅಸೂಟಿ ಮಾತನಾಡಿ ಪಂಚ ಗ್ಯಾರಂಟಿ ಯೋಜನೆಗಳ ಗುರಿ ಶೆ 99.5 ರಷ್ಟು ಗುರಿ ತಲುಪಿದ್ದು ಗದಗ ಜಿಲ್ಲೆಯು ಶೇ 100 ರಷ್ಟು ಗುರಿ ಸಾಧಿಸಿ ರಾಜ್ಯದಲ್ಲಿ ಅಗ್ರಸ್ಥಾನ ಪಡೆಯಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಿ ಇದನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ವಿತರಣೆಯಲ್ಲಿ ಯಾವುದೇ ಸಮಸ್ಯೆಗಳು ಉಂಟಾದರೆ ಅಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿನಿಧಿಗಳ ಸಹಕಾರ ಸದಾಕಾಲ ಇರುತ್ತದೆ. ಅರ್ಹ ಫಲಾನುಭವಿಗಳು ಯೋಜನೆಗಳ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಪಂಚ ಗ್ಯಾರಂಟಿ ಯೋಜನೆಗಳ ಗುರಿ ಶೇ 100 ರಷ್ಟು ಸಾಧಿಸಲು ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ಶ್ರಮಿಸಬೇಕು ಎಂದು ಅಶೋಕ ಮಂದಾಲಿ ನುಡಿದರು.

ಪಂಚ ಗ್ಯಾರ0ಟಿ ಯೋಜನೆಗಳ ಸಂಬ0ಧಿತ ಅಧಿಕಾರಿಗಳು ಈ ಕೆಳಗಿನಂತೆ ಸಭೆಗೆ ಮಾಹಿತಿ ಒದಗಿಸಿದರು.ಗೃಹಲಕ್ಷ್ಮೀ ಯೊಜನೆಯಡಿ ಜೂನ್ 2025 ರವರೆಗೆ ಗದಗ ತಾಲೂಕಿನಲ್ಲಿ 80911 ಅರ್ಜಿಗಳು ನೋಂದಣಿಯಾಗಿದ್ದು, ಅದರಲ್ಲಿ 80447 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ.ಶೇ 99.42 % ರಷ್ಟು ಸಾಧನೆಯಾಗಿದೆ.ಅನ್ನಭಾಗ್ಯ ಯೋಜನೆಯಡಿ ಗದಗ ಶಹರ (ಐಆರ್‌ಎ) ಸೆಪ್ಟೆಂಬರ್ 2025 ರ ಮಾಹೆಯಲ್ಲಿ ರಾಜ್ಯ ಸರ್ಕಾರ ಅನ್ನಭಾಗ್ಯ ಹಂಚಿಕೆ ಯೋಜನೆಯಡಿ ಒಟ್ಟು 33529 ಪಡಿತರ ಕಾರ್ಡುಗಳಿದ್ದು 5544.40 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ.

ಗದಗ ಗ್ರಾಮೀಣ ಭಾಗದ ಸೆಪ್ಟೆಂಬರ್ 2025 ರ ಮಾಹೆಯಲ್ಲಿ ರಾಜ್ಯ ಸರ್ಕಾರ ಅನ್ನಭಾಗ್ಯ ಹಂಚಿಕೆ ಯೋಜನೆಯಡಿ ಒಟ್ಟು 48402 ಪಡಿತರ ಕಾಡುಗಳಿದ್ದು 7498.05 ಕ್ವಿಂಟಲ್ ಅಕ್ಕಿ ಹಂಚಿಕೆಮಾಡಲಾಗಿದೆ.ಗೃಹ ಜ್ಯೋತಿ ಯೋಜನೆಯಡಿ 30-9-2025 ರವರೆಗೆ ಗದಗ ಶಹರ ಉಪವಿಭಾಗದಲ್ಲಿ 48708 ಸ್ತಾವರಗಳು ಅರ್ಹವಾಗಿದ್ದು 48473 ಸ್ಥಾವರಗಳು ನೋಂದಣಿಯಾಗಿವೆ. ಶೇ 99.52 ಪ್ರಗತಿಯಾಗಿದೆ.

ಗದಗ ಗ್ರಾಮೀಣ ಉಪವಿಭಾಗದಲ್ಲಿ 53268 ಸ್ಥಾವರಗಳು ಅರ್ಹವಾಗಿದ್ದು 53030 ಸ್ಥಾವರಗಳು ನೋಂದಣಿಯಾಗಿವೆ. ಶೇ 99.55 ರಷ್ಟು ಪ್ರಗತಿಯಾಗಿದೆ.ಯುವ ನಿಧಿ ಯೋಜನೆಯಡಿ ಜುಲೈ 2025 ರಲ್ಲಿ ಅರ್ಹ ಫಲಾನುಭವಿಗಳಿಗೆ 53,79,000 ರೂ. ಹಣ ಡಿಬಿಟಿ ಮೂಲಕ ಜಮಾ ಮಾಡಲಾಗಿದೆ. ಗದಗ ತಾಲೂಕಿನಲ್ಲಿ ಯುವ ನಿಧಿ ಯೋಜನೆಯ ಅಡಿಯಲ್ಲಿ ಜುಲೈ 2025 ರವರೆಗೆ 2159 ಅಭ್ಯರ್ಥಿಗಳು ನೊಂದಾಯಿಸಿಕೊ0ಡಿರುತ್ತಾರೆ.ಶಕ್ತಿ ಯೋಜನೆಯಡಿ ಗದಗ ತಾಲೂಕಿನಲ್ಲಿ 3,54,00,000 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿರುತ್ತಾರೆ.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಉಪಾಧ್ಯಕ್ಷ ನೀಲಮ್ಮ ಬೋಳನವರ, ಸದಸ್ಯರುಗಳಾದ ಈರಣ್ಣ ಹುನಸಿಕಟ್ಟಿ, ಷರೀಫ್ ಬಿಳೆಯಲಿ, ತಾಲೂಕು ಗ್ಯಾರಂಟಿ ಸದಸ್ಯರುಗಳಾದ ದಯಾನಂದ ಪವಾರ, ಶಂಭು ಕಾಳೆ, ಸಾವಿತ್ರಿ ಹೂಗಾರ, ಸಂಗು ಕೆರಕಲಕಟ್ಟಿ, ಎನ್.ಬಿ.ದೇಸಾಯಿ ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ್, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಚಿಂಚಲಿ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಎಚ್ ಬಾರಕೇರ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಎಸ್.ಎನ್.ಬಳ್ಳಾರಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ, ಹಾಗೂ ಪಂಚ ಗ್ಯಾರಂಟಿ ಯೋಜನೆಗೆ ಸಂಬ0ಧಿತ ಅಧಿಕಾರಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande