
ಹೊಸಪೇಟೆ, 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಟಿಎಂಎಇಎಸ್ ನಸಿರ್ಂಗ್ ಆಫ್ ಸ್ಕೂಲ್ ಇವರ ಸಹಯೋಗದಲ್ಲಿ ಅಕ್ಟೋಬರ್.29 ರಂದು ಬೆ.10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಸುಬ್ರಮಣ್ಯ.ಎನ್ ಮತ್ತು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಶಾಂತ್ ನಾಗಲಾಪುರ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಂಕರ ನಾಯ್ಕ್.ಎಲ್.ಆರ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಆರೋಗ್ಯ ನಿರ್ಮೂಲನಾಧಿಕಾರಿ ಡಾ.ರಾಧಿಕ.ಕೆ ಪ್ರಾಸ್ತಾವಿಕ ನುಡಿಯಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಕೆ.ಪ್ರಹ್ಲಾದ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಶ್ರೀನಿವಾಸಮೂರ್ತಿ, ಟಿಎಂಎಇ ಸಂಸ್ಥೆಯ ನಸಿರ್ಂಗ್ ಆಫ್ ಸ್ಕೂಲ್ ಪ್ರಾಂಶುಪಾಲರು ಸೋಮಶೇಖರ್.ಎನ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ಜಂಬಯ್ಯ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಸತೀಶ್ ಚಂದ್ರ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ, ಅಧಿಕಾರಿ ಡಾ.ವಿನಯ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಭಾಸ್ಕರ್.ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ ನಾಯ್ಕ, ಹೊಸಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ.ವಿನೋದ ಮತ್ತು ಸಮಾಜ ಕಾರ್ಯಕರ್ತರು ಮಾರೇಶ್.ಜಿ ವಂದನಾರ್ಪಣೆ ಮಾಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್