








ಬಳ್ಳಾರಿ, 28 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಯುವಪೀಳಿಗೆ ಸದಾ ಕ್ರೀಡಾ ಮತ್ತು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯ ಸಮಸ್ತ ಸಂಘ ಸಂಸ್ಥೆಗಳ ಇವರ ಸಹಯೋಗದಲ್ಲಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ-2025-26ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಯುವಕ-ಯುವತಿಯರು ವಿಭಿನ್ನ ಹಾಗೂ ವಿಶಿಷ್ಟವಾದ ಪ್ರತಿಭೆಯನ್ನು ಹೊಂದಿರುತ್ತಾರೆ. ಸಂಕಲ್ಪ ಇಟ್ಟುಕೊಂಡು ಗುರಿ ತಲುಪಿದರೆ, ಯಶಸ್ಸು ನಿಮ್ಮದಾಗುತ್ತದೆ. ವಿದ್ಯಾಭ್ಯಾಸದ ಜೊತೆಗೆ ಅನೇಕ ರಂಗಗಳಲ್ಲಿ ಯುವಕರು ತಮ್ಮನ್ನು ತಾವು ತೊಡಗಿಸಿಕೊಂಡು ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಕಲಾವಿದರ ಒಕ್ಕೂಟ ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಅವರು ಅಧ್ಯಕ್ಷತೆ ವಹಿಸಿ, ಜೀವನದ ಸ್ವಾರಸ್ಯವನ್ನು ಗೀಗೀ ಪದ ಹಾಡುವ ಮೂಲಕ ಯುವಕ ಯುವತಿಯರಿಗೆ ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಗ್ರೇಸಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ನಾನಾ ಶಾಲಾ - ಕಾಲೇಜು ವಿದ್ಯಾರ್ಥಿಗಳಿಂದ ಜಾನಪದ ನೃತ್ಯ, ಜಾನಪದ ಗೀತೆ, ಕಥೆ ಬರೆಯುವುದು, ಚಿತ್ರಕಲೆ, ಭಾಷಣ, ಕವಿತೆ, ವಿಜ್ಞಾನ ಮೇಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಸಾಹಿತಿ ಹಾಗೂ ಸಹಾಯಕ ಪ್ರಾಧ್ಯಾಪಕ ಡಾ.ಶಾಂಮೂರ್ತಿ, ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಕನ್ನಡ ಅಧ್ಯಾಯನ ವಿಭಾಗದ ಉಪನ್ಯಾಸಕರಾದ ಡಾ. ಶಕೀಲಾ, ಮಾತೃ ಮಹಿಳಾ ಮಂಡಳಿ ಅಧ್ಯಕ್ಷರಾದ ಪುಷ್ಪ ಚಂದ್ರಶೇಖರ, ಬಿಐಟಿಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರವೀಂದ್ರ ಹಿರೇಮಠ, ಕೊರ್ಲಗುಂದಿ ಬಸವನಗೌಡ, ಉಪನ್ಯಾಸಕ ಎ.ಎಂ.ಪಿ. ವೀರೇಶ್ ಸ್ವಾಮಿ ವೇದಿಕೆಯಲ್ಲಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್