
ಶಿವಮೊಗ್ಗ, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ನ.7 ರಿಂದ 10 ರವರೆಗೆ ಕೃಷಿ ಮಹಾವಿದ್ಯಾಲಯ ನವಲೆ ಆವರಣದಲ್ಲಿ ಕೃಷಿ-ತೋಟಗಾರಿಕೆ ಮೇಳ-2025 ಕಾರ್ಯಕ್ರಮವನ್ನು “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಶೀರ್ಷಿಕೆ ಅಡಿಯಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ನ.8 ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೆರವೇರಿಸುವರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಪುಸ್ತಕ/ತಾಂತ್ರಿಕ ಕೈಪಿಡಿಗಳನ್ನು ಬಿಡುಗಡೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa