ನೇರಗುತ್ತಿಗೆ ಮೂಲಕ ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಧಾರವಾಡ, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವೆಂಬರ್ 06, 2025 ರೊಳಗಾಗಿ ವಿಶೇಷ ಡಿಇಡಿ,
ನೇರಗುತ್ತಿಗೆ ಮೂಲಕ ವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ


ಧಾರವಾಡ, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನವೆಂಬರ್ 06, 2025 ರೊಳಗಾಗಿ ವಿಶೇಷ ಡಿಇಡಿ, ಬಿಇಡಿ ಪ್ರಮಾಣ ಪತ್ರ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಲ್ಲಿ ನೇರಗುತ್ತಿಗೆಯ ಸಮನ್ವಯ ಶಿಕ್ಷಕರು 3 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ, ಧಾರವಾಡ ಕಚೇರಿಯ ಅಧೀಕ್ಷಕರನ್ನು ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande