
ಧಾರವಾಡ, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಸರ್ಕಾರವು ನೀಡುವ ಸಹಕಾರ ರತ್ನ 2025ನೇ ಸಾಲಿನ ಪ್ರಶಸ್ತಿಗಾಗಿ ಅರ್ಹ ಸಹಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಹಕಾರ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ನಿಷ್ಕಳಂಕ ಸೇವೆ ಸಲ್ಲಿಸಿರುವ, ಧಾರವಾಡ ಜಿಲ್ಲೆಯ ನಿವಾಸಿಗಳು ತಮ್ಮ ವೈಯಕ್ತಿಕ ಪರಿಚಯ, ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವಿವರ, ಸಹಕಾರ ಚಳುವಳಿಯಲ್ಲಿ ತೊಡಗಿಸಿಕೊಂಡಿರುವ ವಿವರ ಹಾಗೂ ಅಗತ್ಯ ದಾಖಲೆಗಳೊಂದಿಗೆ ಧಾರವಾಡ ಸಹಕಾರ ಸಂಘಗಳ ಉಪ ನಿಬಂಧಕರಿಗೆ ಅಕ್ಟೋಬರ್ 30, 2025 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು ಎಂದು ಸಹಕಾರ ಸಂಘಗಳ ಉಪನಿಬಂಧಕ ದಸ್ತಗಿರ್ ಅಲಿ ಕೋಲಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa