ಬಿಹಾರ : ಮೊದಲ ಹಂತದ 27% ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಆರೋಪಗಳು
ಪಾಟ್ನಾ, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿರುವ 1,314 ಅಭ್ಯರ್ಥಿಗಳಲ್ಲಿ ಶೇಕಡಾ 27 ರಷ್ಟು ಅಭ್ಯರ್ಥಿಗಳು ಕೊಲೆ, ಕೊಲೆ ಯತ್ನ, ಅತ್ಯಾಚಾರ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳ
Criminal


ಪಾಟ್ನಾ, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಿಹಾರ ವಿಧಾನ ಸಭಾ ಚುನಾವಣೆಯ ಮೊದಲ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿರುವ 1,314 ಅಭ್ಯರ್ಥಿಗಳಲ್ಲಿ ಶೇಕಡಾ 27 ರಷ್ಟು ಅಭ್ಯರ್ಥಿಗಳು ಕೊಲೆ, ಕೊಲೆ ಯತ್ನ, ಅತ್ಯಾಚಾರ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ.

2025 ರ ವಿಧಾನ ಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದ ಮತದಾನ ನವೆಂಬರ್ 6 ರಂದು, ಮತ್ತು ಎರಡನೇ ಹಂತ ನವೆಂಬರ್ 11 ರಂದು ನಡೆಯಲಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹಾಗೂ ಬಿಹಾರ ಎಲೆಕ್ಷನ್ ವಾಚ್ ಪ್ರಕಟಿಸಿದ ವರದಿಯ ಪ್ರಕಾರ, 1,303 ಅಭ್ಯರ್ಥಿಗಳ ಚುನಾವಣಾ ಅಫಿಡವಿಟ್‌ಗಳ ವಿಶ್ಲೇಷಣೆಯಿಂದ, 423 (ಶೇ. 32) ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಇವುಗಳಲ್ಲಿ 354 (ಶೇ. 27) ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್ ಆರೋಪಗಳು ದಾಖಲಾಗಿವೆ.

ಇವರಲ್ಲಿ 33 ಮಂದಿ ಕೊಲೆ ಆರೋಪ, 86 ಮಂದಿ ಕೊಲೆ ಯತ್ನ ಆರೋಪ, ಹಾಗೂ 42 ಮಂದಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande