ಶೇಕಡ ನೂರರಷ್ಟು ಗುರಿ ಸಾಧಿಸಲು ಜಿಲ್ಲಾಧಿಕಾರಿ ಸೂಚನೆ
ಹಾಸನ, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಶೇಕಡ ನೂರರಷ್ಟು ಗುರಿ ಸಾಧಿಸಲು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ
Meeting


ಹಾಸನ, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಶೇಕಡ ನೂರರಷ್ಟು ಗುರಿ ಸಾಧಿಸಲು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ಯಾವುದೇ ಇಲಾಖೆಯಿಂದ ಅನುದಾನ ಪೂರ್ಣ ಪ್ರಮಾಣದಲ್ಲಿ ವೆಚ್ಚವಾಗದೆ ವಾಪಸ್ಸು ಹೋಗಬಾರದು ಈ ನಿಟ್ಟಿನಲ್ಲಿ ಅಧಿಕಾರಿಗಳು ನಿಗಾವಹಿಸಬೇಕು ಎಂದರಲ್ಲದೆ, ಅನುದಾನ ವಾಪಸ್ಸು ಹೋದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಿ.ಎಂ.ಕೆ.ಎಸ್.ವೈ. ಮುಖ್ಯ ಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆಯಡಿ ಕೃಷಿ ಪರಿಕರಗಳನ್ನು ಅಹ ಫಲಾನುಭವಿಗಳಿಗೆ ವಿತರಣೆ, ಬಿತ್ತನೆ ಬೀಜ ಮಾಡಲು ಕ್ರಮವಹಿಸುವುದರ ಜೊತೆಗೆ ಮಣ್ಣಿನ ಫಲವತ್ತತೆ ಪರೀಕ್ಷೆಗೂ ಒತ್ತು ನೀಡುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಉತ್ತೇಜನ ನೀಡುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.

ಸಣ್ಣ ನೀರಾವರಿ ಇಲಾಖೆ ಹಾಗೂ ಚೆಸ್ಕಾಂ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುವುದರ ಮೂಲಕ ಈಗಾಗಲೇ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಾಲ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಕ್ರಮ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪರಿಕರಗಳ ವಿತರಣೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಕಲಚೇತನರಿಗೆ ಸಾಧನ ಸಲಕರಣೆ ಮತ್ತು ಶೇಕಡ ನೂರರಷ್ಟು ಯು.ಡಿ.ಐ.ಡಿ. ವಿತರಣೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪೂರಕ ಆಹಾರ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಒದಗಿಸುವಂತೆ ತಿಳಿಸಿದರಲ್ಲದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಂಧಿಸಿದಂತೆ ದೂರುಗಳು ಬಂದಿದ್ದಲ್ಲಿ ಕ್ರಮವಹಿಸಲು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಮಂಜುನಾಥ್, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಚಂದ್ರಮೌಳಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ದೂದ್‌ಫಿರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande