
ಹಾಸನ, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಹಾಸನ ವತಿಯಿಂದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಬೌದ್ಧ, ಸಿಖ್ಖ್, ಹಾಗೂ ಪಾರ್ಸಿ ಜನಾಂಗದವರಿಗೆ 2025-26ನೇ ಸಾಲಿನ ಸಮುದಾಯ ಆಧಾರಿತ ತರಬೇತಿ ಯೋಜನೆ, ಮಹಿಳಾ ಸ್ವಸಹಾಯ ಸಂಘ ಮತ್ತು ಸಾಂತ್ವನ ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನ.15 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, 1 ನೇ ಮಹಡಿ, ಸಾಲಗಾಮೆ ಮುಖ್ಯ ರಸ್ತೆ, ಆಕಾಶವಾಣಿ ಕ್ವಾಟ್ರಸ್ ಹಿಂಭಾಗ, ಶ್ರೀ, ವಿದ್ಯಾ ಗಣಪತಿ ದೇವಸ್ಥಾನ ಅಡ್ಡ ರಸ್ತೆ, ಮಲ್ನಾಡ್ ಎಂಜಿನಿಯರಿಂಗ್ ಕಾಲೇಜ್ ಹತ್ತಿರ, ಹಾಸನ. ದೂರವಾಣಿ ಸಂಖ್ಯೆ:08172-246333 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa