
ಬೆಂಗಳೂರು, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಅಂತಾರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳ ನಿಯೋಗವು ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ. ಗೋವಿಂದರಾಜು ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.
ನಿಯೋಗದಲ್ಲಿ ಎಫ್‌ಐಬಿಎ ಅಧ್ಯಕ್ಷ ಶೇಖ್ ಸೌದ್ ಅಲಿ ಅಲ್ ಥಾನಿ, ಸಚಿವ ಜನರಲ್ ಆಂಡ್ರಿಯಾಸ್ ಝಾಗ್ಲಿಸ್, ಮತ್ತು ಏಷ್ಯಾ ಕಾರ್ಯನಿರ್ವಾಹಕ ನಿರ್ದೇಶಕ ಹಗೋಪ್ ಖಜಿರಿಯನ್ ಉಪಸ್ಥಿತರಿದ್ದರು.
ನಿಯೋಗದ ಉದ್ದೇಶ ಕರ್ನಾಟಕದಲ್ಲಿ ಬ್ಯಾಸ್ಕೆಟ್‌ಬಾಲ್ ಅಭಿವೃದ್ಧಿ, ಮೂಲಸೌಕರ್ಯ ವಿಸ್ತರಣೆ ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳ ಆಯೋಜನೆ ಕುರಿತ ಚರ್ಚೆ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa