
ವಿಜಯಪುರ, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಿಜಯಪುರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ವತಿಯಿಂದ ತಿಕೋಟಾ ತಾಲೂಕಿನ ಬರಟಗಿ ಗ್ರಾಮದ ಸರಕಾರಿ ಮಾದರಿ ಪ್ರೌಢಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಬೃಹತ್ ಶಿಬಿರ ನಡೆಯಿತು.
ತಿಕೋಟಾ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಗುರುಪಾದಗೌಡ ದಾಶ್ಯಾಳ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಉಪಅಧೀಕ್ಷ ಡಾ. ರವಿಕುಮಾರ ಬಿರಾದಾರ ಉದ್ಘಾಟಿಸಿದರು.
ಈ ಶಿಬಿರದಲ್ಲಿ ಚಿಕ್ಕಮಕ್ಕಳ ಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಸ್ತ್ರೀರೋಗ ಮತ್ತು ಪ್ರಸೂತಿ, ಸಾಮಾನ್ಯ ವೈದ್ಯಕೀಯ, ದಂತ, ನೇತ್ರ, ಎಲುಬು ಮತ್ತು ಕೀಲು, ಚರ್ಮ ರೋಗ, ಕಿವಿ ಮೂಗು ಹಾಗೂ ಗಂಟಲು ಚಿಕಿತ್ಸೆ ವಿಭಾಗಗಳ ನುರಿತ ತಜ್ಞ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು.
ಸುಮಾರು 320 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಅಲ್ಲದೇ, ಇವರಿಗೆ ಉಚಿತವಾಗಿ ಔಷಧಿ ವಿತರಿಸಲಾಯಿತು. ಸುಮಾರು 72 ಶಿಬಿರಾರ್ಥಿಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ಶಿಫಾರಸು ಮಾಡಲಾಯಿತು.
ಈ ಶಿಬಿರದಲ್ಲಿ ಗ್ರಾಮದ ಮುಖಂಡ ಬಸನಗೌಡ ಪಾಟೀಲ, ಡಾ. ರವೀಂದ್ರ ಕರಡಿ, ಡಾ. ಪಿ. ಜಿ. ಮಂಟೂರ, ಡಾ. ಲಕ್ಷ್ಮಿ ಸಂಗೊಳ್ಳಿ, ಡಾ. ರಾಘವೇಂದ್ರ ಇಜೇರಿ, ಡಾ. ಬಸವರಾಜ ಬಾಗೇವಾಡಿ, ವೈದ್ಯಕೀಯ ಸ್ನಾತಕ್ಕೋತ್ತರ ವಿಭಾಗದ ವಿದ್ಯಾರ್ಥಿಗಳು, ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande