ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೊತ್ಸಾಹ : ಸಂಸದೆ ಡಾ.ಸುಧಾ ಮೂರ್ತಿ
ವಿಜಯಪುರ, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕ್ರೀಡೆ ಹಾಗೂ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯುವ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ರಾಜ್ಯ ಸಭಾ ಸಂಸದರಾದ ಡಾ.ಸುಧಾ ಮೂರ್ತಿ ಹ
ಸುಧಾಮೂರ್ತಿ


ವಿಜಯಪುರ, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕ್ರೀಡೆ ಹಾಗೂ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯುವ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಪ್ರೋತ್ಸಾಹಿಸಲಾಗುವುದು ಎಂದು ರಾಜ್ಯ ಸಭಾ ಸಂಸದರಾದ ಡಾ.ಸುಧಾ ಮೂರ್ತಿ ಹೇಳಿದರು.

ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ನಿಲಯದಲ್ಲಿ ಸಂಸದರ ಪ್ರದೇಶಾಭಿವೃದ್ದಿ ಯೋಜನೆಯಡಿ 200.00 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಾಗುತ್ತಿರುವ ಜಿಲ್ಲಾ ಕ್ರೀಡಾ ಶಾಲೆ-ವಸತಿ ನಿಲಯದ ಕಟ್ಟಡ ಭೂಮಿ ಪೂಜೆ ಸಮಾರಂಭದಲ್ಲಿ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ಕ್ರೀಡಾಪಟುಗಳಿಗೆ ಅತ್ಯಾಧುನಿಕ ಸಲಕರಣೆಯೊಂದಿಗೆ ಅತ್ಯುತ್ತಮ ತರಬೇತಿ ನೀಡಿ ಪ್ರೋತ್ಸಾಹಿಸುವ ಅವಶ್ಯಕತೆ ಇದ್ದು, ಸಂಸದರ ಅನುದಾನದಡಿಯಲ್ಲಿ ಉತ್ತಮ ಗುಣಮಟ್ಟದ ಸೈಕ್ಲಿಂಗ್ ಹಾಗೂ ವಾಲಿಬಾಲ್, ಬಾಸ್ಕೆಟ್‍ಬಾಲ್ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು. ಇದರಿಂದ ಕ್ರೀಡಾಪಟುಗಳಿಗೆ ಪ್ರೊತ್ಸಾಹ ದೊರೆತು ಉತ್ತಮ ಸಾಧನೆಗೈಯ್ಯಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಅತ್ಯಾಧುನಿಕ ಉಪಕರಣ, ಜೊತೆಗೆ ಕ್ರೀಡಾ ವಸತಿ ನಿಲಯದಲ್ಲಿ ಸೈಕ್ಲಿಂಗ್ ಮತ್ತು ಬಾಸ್ಕೆಕ್‍ಬಾಲ್, ವಾಲಿಬಾಲ್ ಮೈದಾನ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಮಾತನಾಡಿ, ಶೀಘ್ರದಲ್ಲೇ ಸೈಕ್ಲಿಂಗ್ ವೆಲೋಡ್ರೋಂ ಉದ್ಘಾಟಿಸಲಾಗುವುದು. ಜಿಲ್ಲೆಯ ಕ್ರೀಡಾ ಅಭಿವೃದ್ದಿಗೆ ಪೂರಕ ವಾತಾವರಣ ನಿರ್ಮಿಸಿ ಕ್ರೀಡಾಪಟುಗಳನ್ನು ಪ್ರೊತ್ಸಾಹಿಸಲಾಗುವುದು. ಸುಧಾಮೂರ್ತಿ ಅವರು ಸಹ ಜಿಲ್ಲೆಯ ಕ್ರೀಡಾ ಅಭಿವೃದ್ದಿಗೆ ಸಾಕಷ್ಟು ನೆರವು ಒದಗಿಸಿದ್ದು, ಸರ್ಕಾರವು ಸಹ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಅನೇಕ ಅಭಿವೃದ್ದಿಪರ ಯೋಜನೆಗಳ ಅನುಷ್ಠಾನಗೊಳಿಸುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ.ಜಾವೀದ ಜಮಾದಾರ, ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಭೀಮಸೇನ ಕೋಕರೆ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ, ರಾಜ್ಯ ಸೈಕ್ಲಿಂಗ್ ಸಂಸ್ಥೆ ಚೇರಮನ್ ರಾಜು ಬಿರಾದಾರ, ಜಿಲ್ಲಾ ಅಥ್ಲೆಟಿಕ್ ಸಂಸ್ಥೆ ಅಧ್ಯಕ್ಷ ಎಸ್.ಎಸ್.ಹಿರೇಮಠ, ವೇಟ್ ಲಿಫ್ಟಿಂಗ್ ಅಸೋಸಿಯೇಶನ್ ಕಾರ್ಯದರ್ಶಿ ಚಂದ್ರಕಾಂತ ತಾರನಾಳ, ಯೋಜನಾ ನಿರ್ದೇಶಕ ಆಕಾಶ ತಿಮ್ಮಶೆಟ್ಟಿ, ಜಿ.ಎಂ.ಮಲ್ಜಿ, ಕಚೇರಿ ಅಧೀಕ್ಷಕರಾದ ಶ್ರೀಮತಿ ಪ್ರಿಯಾಂಕ ಹಾಗೂ ಕ್ರೀಡಾ ತರಬೇತುದಾರರು, ವಸತಿ ನಿಲಯದ ಕ್ರೀಡಾಪಟುಗಳು ಉಪಸ್ಥಿತರಿದ್ದರು. ಎಂ.ವಾಯ್.ಚಿಂಚಲಿ ಸ್ವಾಗತಿಸಿದರು. ತರಬೇತುದಾರ ಅಲ್ಕಾಫಡತರೆ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande