ನರಗುಂದ ಪಟ್ಟಣದ ಕಾರ್ಮಿಕ ಸಮುದಾಯ ಭವನದ ಉದ್ಘಾಟನಾ ಸಮಾರಂಭ
ಗದಗ, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಬೆಂಗಳೂರು ಇವರ ಸಹಯೋಗದಲ್ಲಿ ನರಗುಂದ ಪಟ್ಟಣದ ಕಾರ್ಮಿಕ ಸಮುದಾಯ ಭವನದ ಉದ್ಘಾಟನಾ ಸಮಾರಂಭವನ್ನು ನರಗುಂದದ ಡಾಲರ್ಸ ಕಾಲೋನಿಯಲ್ಲಿ ಅಕ್ಟೋಬರ್ 31 ರಂದು ಬೆಳಿಗ್
ಫೋಟೋ


ಗದಗ, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಬೆಂಗಳೂರು ಇವರ ಸಹಯೋಗದಲ್ಲಿ ನರಗುಂದ ಪಟ್ಟಣದ ಕಾರ್ಮಿಕ ಸಮುದಾಯ ಭವನದ ಉದ್ಘಾಟನಾ ಸಮಾರಂಭವನ್ನು ನರಗುಂದದ ಡಾಲರ್ಸ ಕಾಲೋನಿಯಲ್ಲಿ ಅಕ್ಟೋಬರ್ 31 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.

ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ನರಗುಂದ ಶಾಸಕ ಸಿ.ಸಿ.ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ , ಕರ್ನಾಟಕ ಖನಿಜ ಅಬಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾದ್ಯಕ್ಷ ಡಿ.ಆರ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಪುರಸಭೆ ಅಧ್ಯಕ್ಷೆ ಶ್ರೀಮತಿ ನೀಲವ್ವ ವಡ್ಡಿಗೇರಿ, ಉಪಾಧ್ಯಕ್ಷ ಚಂದ್ರಗೌಡ ಕೆ ಪಾಟೀಲ ಆಗಮಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಕರ್ನಾಟಕ ಯೋಜನೆ ಕಾರ್ಯಕ್ರಮ ಸಂಯೋಜನೆ ಮತು ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಮಣದೀಪ್ ಚೌಧರಿ, ಕಾರ್ಮಿಕ ಇಲಾಖೆ ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ, ಪ್ರಾದೇಶಿಕ ಆಯುಕ್ತೆ ಶ್ರೀಮತಿ ಜಾನಕಿ ಕೆ, ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಎನ್.ಶ್ರೀಧರ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಭಾರತಿ ಡಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ , ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ಕಲ್ಯಾಣ ಆಯುಕ್ತ ಆಂಜನೇಯ ಟಿ ಆಗಮಿಸಲಿದ್ದಾರೆ.

ಬೆಳಗಾವಿಯ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ್, ಧಾರವಾಡ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಸಚಿನ್ ವೈ ಹಳೇಮನಿ, ಗದಗ ಉಪವಿಭಾಗದ ಕಾರ್ಮಿಕ ಅಧಿಕಾರಿ ಶ್ರೀಶೈಲ ಎಸ್ ಸೋಮನಕಟ್ಟಿ , ನರಗುಂದ ವೃತ್ತ ಕಾರ್ಮಿಕ ನಿರೀಕ್ಷಕರಾದ ಶ್ರೀಮತಿ ಪೂಜಾ ಶಿಂಧೆ ಸರ್ವರಿಗೂ ಸ್ವಾಗತ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande