
ರಾಯಚೂರು, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಮಟ್ಟದಲ್ಲಿ ನವೆಂಬರ್ 8 ರಂದು ನಡೆಯಲಿರುವ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಅಕ್ಟೋಬರ್ 29ರ ಬುಧವಾರ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶ್ತೀ ಭಕ್ತ ಕನಕದಾಸರ ಜಯಂತಿಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ನಗರದ ರಂಗಮಂದಿರದವರೆಗೆ ಕನಕದಾಸರ ಭಾವಚಿತ್ರ ರಥಯಾತ್ರೆ ಮೆರವಣಿಗೆ ಹೊರಡಲಿದ್ದು, ಪ್ರಮುಖ ಮಾರ್ಗದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು. ಎಲ್ಲಾ ವೃತ್ತಗಳಲ್ಲಿ ದೀಪಾಲಂಕಾರ ಮಾಡಬೇಕು.
ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದ್ದು ರಂಗಮಂದಿರದ ಸುತ್ತಲಿನ ಎಲ್ಲಾ ರಸ್ತೆಗಳಲ್ಲಿ ಮತ್ತು ಆವರಣದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸಲಿರುವ ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸಬೇಕು. ಮೆರವಣಿಗೆ ಮಾರ್ಗದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆಯಾಗಬೇಕು ಎಂದು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಕಲಾವಿದರಿಗೆ ಸನ್ಮಾನ, ಸಾಂಸ್ಕøತಿಕ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು.
ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳು, ಹಾಸ್ಟೆಲ್‍ಗಳಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಕನಕದಾಸ ಜಯಂತಿ ಆಚರಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಶಿμÁ್ಟಚಾರದಂತೆ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರಿಗೆ ವಿತರಿಸಬೇಕು ಎಂದು ತಿಳಿಸಿದರು.
ಈ ಜಯಂತ್ಯುತ್ಸವಕ್ಕೆ ಸಾರ್ವಜನಿಕರು, ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನಾಗೇಂದ್ರಪ್ಪ ಮಠಮಾರಿ, ಹನುಮಂತಪ್ಪ ಜಾಲಿಬೆಂಚಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉತ್ತರಾದೇವಿ, ಸಮಾಜದ ಮುಖಂಡರಾದ ಬಿ ಬಸವರಾಜ, ಟಿ ನರಸಿಂಹ, ಕೆ ವೇಣುಗೋಪಾಲ, ಕೆ ಲಕ್ಷ್ಮಣಸ್ವಾಮಿ, ಗುರುಪ್ರತಾಪ, ಕೆ ನಾಗರಾಜ, ಎಸ್ ರಾಮಣ್ಣ, ಕೆ ರಮೇಶ ಮಾಡಲದಿನ್ನಿ, ಕೆ ತಿಮ್ಮಪ್ಪ ಮರ್ಚಟ್ಟಾಳ, ನಾಗರಾಜ ವಕೀಲರು, ಕೆ ಬಡೆಪ್ಪ ಮಠಮಾರಿ, ಹನುಮಂತಪ್ಪ ವಕೀಲರು, ಶೇಖರ ವಾರದ, ಮಹಾದೇವಪ್ಪ ಮಿರ್ಜಾಪುರ, ಎಪಿಎಂಸಿ ಸದಸ್ಯರಾದ ಜಿ.ಹನುಮಂತ, ಇಲಾಖೆಯ ಅಧಿಕಾರಿಗಳಾದ ಜಿ.ಯು.ಹುಡೇದ, ಸದಾಶಿವಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್