

ಕೊಪ್ಪಳ, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಕನಕದಾಸ ವೃತ್ತದಿಂದ ಪ್ರತಿಭಟನಾ ಮೆರವಣಿಗೆಯ ಮೂಲಕ ನಗರಸಭೆಯ ಮುಂದೆ ಪ್ರತಿಭಟನೆ ಮಾಡಿ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಸರ್ಕಾರದ ಆದೇಶದಂತೆ ನಗರಸಭೆ ಹಾಗೂ ಇನ್ನಿತರ ಇಲಾಖೆಗಳಿಂದ ಪರವಾನಿಗೆ ಪಡೆದು ನಗರಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ಖಾಸಗಿ ಆಸ್ಪತ್ರೆ, ಖಾಸಗಿ ಶಾಲಾ ಕಾಲೇಜು ಹಾಗೂ ಕೈಗಾರಿಕೆ ಸೇರಿದಂತೆ ಎಲ್ಲಾ ಸಣ್ಣ ವ್ಯಾಪಾರಸ್ಥರಿಗೆ, ದೊಡ್ಡ ವ್ಯಾಪಾರಸ್ಥರಿಗೆ, ಯಾವುದೇ ವ್ಯಾಪಾರ ಮಾಡುವ ಅಂಗಡಿ ಮುಂಗಟ್ಟುಗಳಿಗೆ ನೀಡಿರುವ ಪರವಾನಿಗೆಯಲ್ಲಿ ಕರ್ನಾಟಕ ಸರ್ಕಾರದ ಆದೇಶವನ್ನು ನಮೂದಿಸಿ ಕಡ್ಡಾಯವಾಗಿ ನಾಮಫಲಕಗಳಲ್ಲಿ ಶೇ 60% ರಷ್ಟು ಕನ್ನಡವನ್ನು ನಮೂದಿಸಲು ಪರವಾನಿಗೆ ನೀಡಿರುತ್ತದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಿಯವರು ಶೇ 60% ಕನ್ನಡ ನಾಮಫಲಕವನ್ನು ಕಡ್ಡಾಯಗೊಳಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಆದ್ದರಿಂದ ಈ ಕೂಡಲೇ ಮಾನ್ಯ ಜಿಲ್ಲಾಡಳಿತ, ನಗರಸಭೆ ಅಧಿಕಾರಿಗಳು ನವ್ಹಂಬರ ತಿಂಗಳ ಒಳಗೆ ಶೇ.60% ನಾಮಫಲಕ ಅಳವಡಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಮುಂದಿನ ದಿನಮಾನಗಳಲ್ಲಿ ಉಗ್ರವಾದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ಎಚ್ಚರಿಸುವ ಮೂಲಕ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಜಯಕುಮಾರ ಕವಲೂರ, ಕೊಪ್ಪಳ ತಾಲೂಕ ಅಧ್ಯಕ್ಷ ಮಹೇಶ ಅಲ್ಲನಗರ, ಮಹಿಳಾ ಘಟಕದ ಅಧ್ಯಕ್ಷೆ ರಾಜಮ್ಮ ಓಜನಹಳ್ಳಿ, ಜಿ.ಎಸ್. ಗೋನಾಳ, ಶಿವಮ್ಮ, ಸುಜಾತ ತಳಕಲ್, ರಾಜಾ ಹುಸೇನಿ, ಮಂಜುನಾಥ ಪಾಟೀಲ್, ಮಂಜುನಾಥ ಭಜಂತ್ರಿ, ಮರಿಯಪ್ಪ ಮಂಗಳೂರು, ನರಸಮ್ಮ, ಆನಂದ ಮಡಿವಾಳರ, ತಿಮ್ಮನಗೌಡ ಪಾಟೀಲ್, ದಾದಪೀರ, ಉಮೇಶಪ್ಪ ಮಾಳಗಿ, ರವಿ ಬಿಡನಾಳ, ಶಿವು ಚಡ್ಡಿ, ರಾಜು ಕಾಸನಕಂಡಿ, ಮಾರುತಿ ಬನ್ನಿಕೊಪ್ಪ, ಗವಿ ನಾಯಕ, ವಿನಾಯಕ ಪಾಸ್ತೆ, ಆಕಾಶ, ಶಿವಕುಮಾರ, ಶಾಹೀನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್