
ಬಳ್ಳಾರಿ, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಕರ್ನಾಟಕ ಹಾಲು ಒಕ್ಕೂಟಕ್ಕೆ ಪ್ರತಿನಿಧಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಕರ್ನಾಟಕ ಹಾಲು ಒಕ್ಕೂಟದ ನೂತನ ಅಧ್ಯಕ್ಷರ ಆಯ್ಕೆಯ ಸಂದರ್ಭದಲ್ಲಿ ಮತದಾನ ಮಾಡಲು ರಾಘವೇಂದ್ರ ಹಿಟ್ನಾಳ್ ಅವರಿಗೆ ಅಧಿಕಾರವಿದೆ. ಹೀಗಾಗಿ ಇವರ ಆಯ್ಕೆಗೆ ರಾಜಕೀಯವಾಗಿ ಸಾಕಷ್ಟು ಮಹತ್ವವಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್